
ಮಡಿಕೇರಿ, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕೊಡಗು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾದ ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿದ ಪೊಲೀಸರು, ವಶಪಡಿಸಿಕೊಂಡ ನಗದು, ಚಿನ್ನಾಭರಣಗಳು ಹಾಗೂ ಇತರೆ ವಸ್ತುಗಳನ್ನು ಸಂಬಂಧಿತ ಮಾಲೀಕರಿಗೆ ಹಸ್ತಾಂತರಿಸಿದರು.
ಇದರೊಂದಿಗೆ, CEIR ಪೋರ್ಟಲ್ ಮೂಲಕ ಪತ್ತೆ ಹಚ್ಚಲಾದ ಕಾಣೆಯಾದ ಮೊಬೈಲ್ ಫೋನ್ಗಳನ್ನೂ ಕೂಡ ವಾರಸುದಾರರಿಗೆ ಹಿಂತಿರುಗಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ , ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳು ಪರಿಣಾಮಕಾರಿಯಾಗಿದ್ದು, ಸಾರ್ವಜನಿಕರು ತಮ್ಮ ವಸ್ತುಗಳನ್ನು ಮರಳಿ ಪಡೆಯಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ತಮ್ಮ ಮೊಬೈಲ್ಗಳು ಕಳೆದುಹೋದ ಸಂದರ್ಭದಲ್ಲಿ ತಕ್ಷಣ CEIR ಪೋರ್ಟಲ್ನಲ್ಲಿ ಮಾಹಿತಿ ನೀಡಿದರೆ, ಅವುಗಳನ್ನು ಪತ್ತೆ ಹಚ್ಚಲು ಸುಲಭವಾಗುತ್ತದೆ ಎಂದು ಸಲಹೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa