ಸೂರ್ಯಕಾಂತಿ ಬೆಲೆ ಕುಸಿತಕ್ಕೆ ರೈತರ ಆಕ್ರೋಶ ; ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ
ಗದಗ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಈ ಬಾರಿ ಸೂರ್ಯಕಾಂತಿ ಬೆಳೆ ಉತ್ತಮ ಇಳುವರಿ ನೀಡಿದರೂ, ದಿಢೀರ್ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೇ ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭಿಸಿ, ಬೆಂಬಲ ಬೆಲೆ ಘೋಷಿಸಬೇಕು ಎಂದು ನರಗುಂದ ಭಾಗದ ರೈತರು ಆಗ್ರಹಿಸಿದ್ದಾರೆ.
ಫೋಟೋ


ಗದಗ, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಈ ಬಾರಿ ಸೂರ್ಯಕಾಂತಿ ಬೆಳೆ ಉತ್ತಮ ಇಳುವರಿ ನೀಡಿದರೂ, ದಿಢೀರ್ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೇ ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭಿಸಿ, ಬೆಂಬಲ ಬೆಲೆ ಘೋಷಿಸಬೇಕು ಎಂದು ನರಗುಂದ ಭಾಗದ ರೈತರು ಆಗ್ರಹಿಸಿದ್ದಾರೆ.

ನರಗುಂದ ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಸೂರ್ಯಕಾಂತಿ ಕಾಳು ಬರುತ್ತಿರುವ ಹಿನ್ನೆಲೆಯಲ್ಲಿ ಬೆಲೆ ಕುಸಿತ ಕಂಡುಬಂದಿದೆ. ಇತ್ತೀಚೆಗೆ ಒಂದು ಕ್ವಿಂಟಾಲ್ ಸೂರ್ಯಕಾಂತಿಗೆ ₹7,000ಕ್ಕಿಂತ ಹೆಚ್ಚು ಬೆಲೆ ಸಿಗುತ್ತಿದ್ದರೆ, ಇದೀಗ ₹5,000ರಿಂದ ₹6,000ರೊಳಗೆ ವ್ಯವಹಾರ ನಡೆಯುತ್ತಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ರೈತ ಶಿವರಾಜ್ ಪಾಟೀಲ್ ಆಕ್ರೋಶ ಹೊರಹಾಕಿದ್ದಾರೆ.

ಗದಗ ಜಿಲ್ಲೆಯ ಏಳು ತಾಲೂಕುಗಳ ಪೈಕಿ, ನರಗುಂದ ತಾಲೂಕಿನಲ್ಲಿ ಅತೀ ಹೆಚ್ಚು ಸೂರ್ಯಕಾಂತಿ ಬೆಳೆಯಲಾಗಿದ್ದು, ಸುಮಾರು 8,500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬೆಳೆದಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಇತರೆ ಬೆಳೆಗಳು ಹಾನಿಗೊಳಗಾದ ಹಿನ್ನೆಲೆ, ಹಿಂಗಾರು ಹಂಗಾಮಿನಲ್ಲಿ ರೈತರು ಸೂರ್ಯಕಾಂತಿ ಬೆಳೆದಿದ್ದರು. ಉತ್ತಮ ಇಳುವರಿ ಬಂದಿದ್ದರೂ ಬೆಲೆ ಕುಸಿತದಿಂದ ನಷ್ಟ ಎದುರಿಸುತ್ತಿದ್ದಾರೆ.

ಒಂದು ಎಕರೆ ಸೂರ್ಯಕಾಂತಿ ಬೆಳೆಗೆ ₹35,000ರಿಂದ ₹40,000ರವರೆಗೆ ವೆಚ್ಚವಾಗಿದ್ದು, ಪ್ರಸ್ತುತ ಬೆಲೆಯಲ್ಲಿ ಮಾರಾಟ ಮಾಡಿದರೆ ನಷ್ಟ ಅನಿವಾರ್ಯ ಎಂದು ರೈತರು ತಿಳಿಸಿದ್ದಾರೆ. ₹7,725 ಬೆಂಬಲ ಬೆಲೆ ಘೋಷಿಸಿ, ಸರ್ಕಾರವೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande