
ಧಾರವಾಡ, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಧಾರವಾಡದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳ ಸಹಯೋಗದಲ್ಲಿ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ಭವ್ಯವಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಯಾಗಿ ಎಚ್.ಕೆ. ಪಾಟೀಲ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕಲೆ ಎನ್ನುವುದು ಕೇವಲ ಅಭಿವ್ಯಕ್ತಿ ಮಾತ್ರವಲ್ಲ; ಅದು ಸಂಸ್ಕೃತಿಯ ಜೀವಂತಿಕೆ. ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆ ಅರಳಿದಾಗ ಸಮಾಜ ಸುಂದರವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.
ಚಿತ್ರಕಲಾ ಮಹಾವಿದ್ಯಾಲಯದ ಐತಿಹಾಸಿಕ ವೇದಿಕೆಯಲ್ಲಿ ಕಲಾ ಮನಸ್ಸುಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯವೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಸುವರ್ಣ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa