ಹಾವೇರಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ; ಬಿಸಿಯೂಟ ಗುಣಮಟ್ಟಕ್ಕೆ ಕಟ್ಟುನಿಟ್ಟಿನ ಸೂಚನೆ
ಹಾವೇರಿ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಾವೇರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ’ಯ ಎರಡನೇ ದಿನ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ವಿವಿಧ ಇಲಾಖೆಗಳ ಕಾರ್ಯಪ್ರಗತಿಯನ್ನು ಪರಿಶೀಲಿಸಿದರು. ಸಭೆಯಲ್ಲ
Meeting


ಹಾವೇರಿ, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹಾವೇರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ’ಯ ಎರಡನೇ ದಿನ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ವಿವಿಧ ಇಲಾಖೆಗಳ ಕಾರ್ಯಪ್ರಗತಿಯನ್ನು ಪರಿಶೀಲಿಸಿದರು.

ಸಭೆಯಲ್ಲಿ ಮುಖ್ಯವಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಕಾರ್ಯವೈಖರಿ ಕುರಿತು ಸುದೀರ್ಘ ಚರ್ಚೆ ನಡೆಸಿ, ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

ಮಕ್ಕಳಿಗೆ ನೀಡಲಾಗುವ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ವಿಶೇಷ ಗಮನ ಹರಿಸಿದ ಸಚಿವರು, ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಆಹಾರವು ಶುದ್ಧತೆ ಮತ್ತು ಪೌಷ್ಟಿಕಾಂಶದ ದೃಷ್ಟಿಯಿಂದ ಅತ್ಯುತ್ತಮವಾಗಿರಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಯಾವುದೇ ಕಾರಣಕ್ಕೂ ಆಹಾರದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದರು.

ಬಿಸಿಯೂಟ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಸಂಬಂಧಿತ ಅಧಿಕಾರಿಗಳು ಕೇವಲ ದಾಖಲೆಗಳ ಮೇಲೆ ಅವಲಂಬಿಸದೆ, ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಆಹಾರದ ರುಚಿ ಮತ್ತು ಗುಣಮಟ್ಟವನ್ನು ಸ್ವತಃ ಪರಿಶೀಲಿಸಬೇಕು ಎಂದು ಸೂಚಿಸಿದರು.

ಇದೇ ವೇಳೆ, ಬಿಸಿಯೂಟಕ್ಕೆ ಅಗತ್ಯವಾದ ಅಕ್ಕಿ, ಬೇಳೆ ಸೇರಿದಂತೆ ಇತರೆ ಸಾಮಗ್ರಿಗಳ ಪೂರೈಕೆ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯ ಇತರೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿ, ಬಾಕಿ ಇರುವ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಒದಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಕ್ಕಳ ಭವಿಷ್ಯ ಮತ್ತು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವುದು ಸರಕಾರದ ಆದ್ಯತೆ ಎಂದು ಸಚಿವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande