
ಗದಗ, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಬೆಳೆ ಪ್ರಕರಣವನ್ನು ಅಬಕಾರಿ ಇಲಾಖೆ ಭೇದಿಸಿದ್ದು, ಲಕ್ಷ್ಮೇಶ್ವರ ತಾಲೂಕಿನ ಗುಳಗುಂಜಿಕೊಪ್ಪ ಗ್ರಾಮದಲ್ಲಿ ಭರ್ಜರಿ ದಾಳಿ ನಡೆಸಿ ಒಬ್ಬರನ್ನು ಬಂಧಿಸಲಾಗಿದೆ.
ಗ್ರಾಮದ ತೋಟದ ಮನೆಯ ಪಕ್ಕದಲ್ಲಿ ಗೂಳಪ್ಪ ಎಂಬಾತ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ದಾಳಿ ನಡೆಸಿತು.
ದಾಳಿಯ ವೇಳೆ ಒಟ್ಟು 126 ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದ್ದು, ಜೊತೆಗೆ 428 ಗ್ರಾಂ ಒಣ ಗಾಂಜಾ ಸಹ ಜಪ್ತಿ ಮಾಡಲಾಗಿದೆ.
ಈ ಕಾರ್ಯಾಚರಣೆ ಗದಗ ಅಬಕಾರಿ ಡಿಸಿ ಲಕ್ಷ್ಮೀ ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ.
ಅಬಕಾರಿ ಇಲಾಖೆಯ ಈ ದಿಟ್ಟ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP