ಬ್ಲಾಕ್ಮೇಲ್ ಅಥವಾ ಹಣದ ಒತ್ತಾಯಕ್ಕೆ ತಕ್ಷಣ ಲೋಕಾಯುಕ್ತಕ್ಕೆ ದೂರು ನೀಡಿ
ಗದಗ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಯಾರಾದರೂ ಹಣಕ್ಕಾಗಿ ಒತ್ತಾಯಿಸಿದರೆ ಅಥವಾ ವಿಡಿಯೋ ಮೂಲಕ ಬ್ಲಾಕ್ಮೇಲ್ ಮಾಡಿದರೆ ತಕ್ಷಣ ಲೋಕಾಯುಕ್ತಕ್ಕೆ ದೂರು ನೀಡಬೇಕು ಎಂದು ಗದಗ ಲೋಕಾಯುಕ್ತ ಡಿಎಸ್ಪಿ ವಿಜಯಕುಮಾರ ಬಿರದಾರ ತಿಳಿಸಿದರು. ಗ
ಫೋಟೋ


ಗದಗ, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಯಾರಾದರೂ ಹಣಕ್ಕಾಗಿ ಒತ್ತಾಯಿಸಿದರೆ ಅಥವಾ ವಿಡಿಯೋ ಮೂಲಕ ಬ್ಲಾಕ್ಮೇಲ್ ಮಾಡಿದರೆ ತಕ್ಷಣ ಲೋಕಾಯುಕ್ತಕ್ಕೆ ದೂರು ನೀಡಬೇಕು ಎಂದು ಗದಗ ಲೋಕಾಯುಕ್ತ ಡಿಎಸ್ಪಿ ವಿಜಯಕುಮಾರ ಬಿರದಾರ ತಿಳಿಸಿದರು.

ಗದಗ ಜಿಲ್ಲೆ ಶಿರಹಟ್ಟಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಆಯೋಜಿಸಲಾದ ಲೋಕಾಯುಕ್ತ ಸಭೆಯಲ್ಲಿ ವಿವಿಧ ಇಲಾಖೆಗಳ ಕಾರ್ಯಪದ್ಧತಿ ಕುರಿತು ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಅಧಿಕಾರಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳ ಮಿತಿಯೊಳಗೆ ಕೆಲಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು. ಅನಗತ್ಯವಾಗಿ ಜನರನ್ನು ಸತಾಯಿಸುವುದನ್ನು ತಪ್ಪಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ವಾರಸಾ ಪ್ರಕರಣಗಳಲ್ಲಿ ಲೋಪದೋಷಗಳು ಕಂಡುಬರುತ್ತಿದ್ದು, ಸ್ಥಳ ಪರಿಶೀಲನೆ ನಡೆಸಿ ಅರ್ಹರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ್ಗೆ ಸೂಚಿಸಿದರು. ಗ್ರಾಮ ಪಂಚಾಯಿತಿಗಳಲ್ಲಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಡ್ಡಾಯವಾಗಿ ಸ್ವೀಕೃತಿ ಪತ್ರ ನೀಡಬೇಕು ಎಂದು ಹೇಳಿದರು.

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ನೀಡುವ ಕುಡಿಯುವ ನೀರಿನ ಗುಣಮಟ್ಟವನ್ನು ಪರಿಶೀಲಿಸುವುದು ಅಗತ್ಯ. ಕೆಲವು ಕಡೆಗಳಲ್ಲಿ ಅವಧಿ ಮೀರಿದ ಔಷಧಿಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ದೋಷಗಳನ್ನು ಸರಿಪಡಿಸಬೇಕು ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದ ಬಗ್ಗೆ ಮಾತನಾಡಿದ ಅವರು, ಪ್ರಾಥಮಿಕ ಹಂತದಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆಯಿಂದ ಪಿಯುಸಿಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರಿ ಶಾಲೆಗಳ ಶಿಕ್ಷಕರು ಇಚ್ಛಾಶಕ್ತಿಯಿಂದ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಮುಂದಾಗಬೇಕು ಎಂದು ಹೇಳಿದರು.

ಕಡಿಮೆ ಪ್ರಗತಿ ಸಾಧಿಸುವ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಫಲಿತಾಂಶವನ್ನು ಸುಧಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಆರ್ಪಿ ಹಾಗೂ ಬಿಆರ್ಪಿಗಳಿಗೆ ಸೂಚಿಸಿದರು.

ಸಭೆಯಲ್ಲಿ ತಹಸೀಲ್ದಾರ್ ರಾಘವೇಂದ್ರ ರಾವ್, ತಾಪಂ ಇಒ ಆರ್.ವಿ. ದೊಡ್ಡಮನಿ, ಗ್ರೇಡ್-2 ತಹಸೀಲ್ದಾರ್ ಇ.ಎ. ಮುಳಗುಂದಮಠ, ಗುಡ್ಡ ಪಿಎಸ್ಐ ಈರಪ್ಪ ರಿತ್ತಿ, ಸಿಡಿಪಿಓ ಮೃತ್ಯುಂಜಯ ದಾನಹೇರಿ, ಟಿಎಚ್ಒ ಡಾ. ಸುಭಾಸ್ ದೈಗೊಂಡ, ಬಿಇಒ ಎನ್.ಎನ್. ನಾಯ್ಕ, ಎಆರ್ಒ ರಾಮಪ್ಪ ಪೂಜಾರ, ಸಮಾಜ ಕಲ್ಯಾಣಾಧಿಕಾರಿ ಗೋಪಾಲ ನಾಯ್ಕ, ಉಪನಂದಣಾಧಿಕಾರಿ ಶರಣಪ್ಪ ಪವಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande