ರಾಯ್ಸೆನ್ನಲ್ಲಿ ರಾಷ್ಟ್ರೀಯ ‘ಉನ್ನತ್ ಕೃಷಿ ಮಹೋತ್ಸವ’ ಆರಂಭ
ಭೋಪಾಲ್, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಧ್ಯ ಪ್ರದೇಶದ ರಾಯ್ಸೆನ್ ಜಿಲ್ಲೆಯ ದಸರಾ ಮೈದಾನದಲ್ಲಿ ಮೂರು ದಿನಗಳ ರಾಷ್ಟ್ರೀಯ ‘ಉನ್ನತ್ ಕೃಷಿ ಮಹೋತ್ಸವ’ ಹಾಗೂ ತರಬೇತಿ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದರು. ಕಾರ್ಯಕ್
ರಾಜನಾಥ ಸಿಂಗ್


ಭೋಪಾಲ್, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಧ್ಯ ಪ್ರದೇಶದ ರಾಯ್ಸೆನ್ ಜಿಲ್ಲೆಯ ದಸರಾ ಮೈದಾನದಲ್ಲಿ ಮೂರು ದಿನಗಳ ರಾಷ್ಟ್ರೀಯ ‘ಉನ್ನತ್ ಕೃಷಿ ಮಹೋತ್ಸವ’ ಹಾಗೂ ತರಬೇತಿ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, “ರಾಯ್ಸೆನ್ ಮಣ್ಣಿನಲ್ಲಿ ನಡೆಯುತ್ತಿರುವ ಈ ಮಹೋತ್ಸವ ರೈತರ ಜೀವನದಲ್ಲಿ ಮಹತ್ವದ ಬದಲಾವಣೆ ತರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೃಷಿ, ಉದ್ಯಮ ಮತ್ತು ಸೇವಾ ಕ್ಷೇತ್ರಗಳ ಮೇಲೆ ದೇಶದ ಆರ್ಥಿಕತೆ ನಿಂತಿದ್ದು, ಈ ಮೂರು ಕ್ಷೇತ್ರಗಳ ಮೂಲದಲ್ಲೂ ರೈತನ ಪಾತ್ರವೇ ಪ್ರಮುಖವಾಗಿದೆ ಎಂದು ಹೇಳಿದರು.

ಯುವಕರು ಕೃಷಿ ಕ್ಷೇತ್ರಕ್ಕೆ ಹೆಚ್ಚು ಸಂಖ್ಯೆಯಲ್ಲಿ ಬರಬೇಕಿದ್ದು, ಆಧುನಿಕ ತಂತ್ರಜ್ಞಾನ ಬಳಸಿ ‘ಸ್ಮಾರ್ಟ್ ಕೃಷಿ’ ಮಾಡುವ ಅವಶ್ಯಕತೆ ಇದೆ ಎಂದು ಅವರು ಕರೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರೈತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದರು. ಪ್ರತಿ ವರ್ಷ ರೈತರಿಗೆ ₹6,000 ನೇರವಾಗಿ ಖಾತೆಗೆ ಜಮೆಯಾಗುವ ವ್ಯವಸ್ಥೆ, ಬೆಳೆ ವಿಮೆ, ಮಣ್ಣಿನ ಆರೋಗ್ಯ ಕಾರ್ಡ್ ಮುಂತಾದ ಯೋಜನೆಗಳು ರೈತರಿಗೆ ನೆರವಾಗುತ್ತಿವೆ ಎಂದು ವಿವರಿಸಿದರು.

ಇದೇ ವೇಳೆ ವಿದ್ಯುತ್, ನೀರು, ರಸ್ತೆ ಮತ್ತು ಆನ್ಲೈನ್ ಮಾರುಕಟ್ಟೆ ವ್ಯವಸ್ಥೆಗಳ ಮೂಲಕ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ದೇಶದ ವಿವಿಧ ಭಾಗಗಳಿಂದ ವಿಜ್ಞಾನಿಗಳು, ತಜ್ಞರು ಮತ್ತು ಪ್ರಗತಿಪರ ರೈತರು ಈ ಮಹೋತ್ಸವದಲ್ಲಿ ಭಾಗವಹಿಸಿರುವುದಾಗಿ ಹೇಳಿದರು. ತೋಟಗಾರಿಕೆ, ಸಮಗ್ರ ಕೃಷಿ, ಡ್ರೋನ್ ತಂತ್ರಜ್ಞಾನ ಹಾಗೂ ಸಣ್ಣ ಜಾಗದಲ್ಲಿ ಹೆಚ್ಚು ಲಾಭ ಪಡೆಯುವ ವಿಧಾನಗಳ ಕುರಿತು ಪ್ರದರ್ಶನಗಳು ಮತ್ತು ತರಬೇತಿಗಳು ನಡೆಯುತ್ತಿವೆ ಎಂದು ತಿಳಿಸಿದರು.

ಈ ಮಹೋತ್ಸವವು ಕೇವಲ ಭಾಷಣಗಳಿಗೆ ಸೀಮಿತವಾಗಿಲ್ಲ; ರೈತರಿಗೆ ನೇರವಾಗಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ರಾಜ್ಯವಾರು ಕೃಷಿ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಅದರ ಭಾಗವಾಗಿ ವಿದಿಶಾ, ರಾಯ್ಸೆನ್, ಸೆಹೋರ್ ಹಾಗೂ ದೇವಾಸ್ ಜಿಲ್ಲೆಗಳಿಗೆ ವಿಶೇಷ ಕೃಷಿ ಮಾರ್ಗಸೂಚಿ ರೂಪಿಸಲಾಗಿದೆ ಎಂದು ಚೌಹಾಣ್ ತಿಳಿಸಿದರು.

ಈ ಮೂರು ದಿನಗಳ ಮಹೋತ್ಸವವು ಕೃಷಿ ಕ್ಷೇತ್ರದಲ್ಲಿ ನವೀನ ತಂತ್ರಜ್ಞಾನ ಹಾಗೂ ವಿಜ್ಞಾನಾಧಾರಿತ ವಿಧಾನಗಳನ್ನು ರೈತರಿಗೆ ಪರಿಚಯಿಸುವ ಮಹತ್ವದ ವೇದಿಕೆಯಾಗಿ ಪರಿಣಮಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande