
ಬೆಂಗಳೂರು, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದು, “ಅಭಿವೃದ್ಧಿಗೆ ಹಣವಿಲ್ಲ, ಯೋಜನೆಗಳಿಗೆ ಕಾಸಿಲ್ಲ” ಎಂದು ಟೀಕಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇವಲ ಮೂರು ವರ್ಷಗಳ ಆಡಳಿತದಲ್ಲಿ ರಾಜ್ಯವನ್ನು ಸಾಲದ ಸುಳಿಗೆ ತಳ್ಳಲಾಗಿದ್ದು, ಕರ್ನಾಟಕದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ. “ಸಮೃದ್ಧ ಕರ್ನಾಟಕವನ್ನು ದಿವಾಳಿ ಎಬ್ಬಿಸಿದ ಕೀರ್ತಿ ಈ ಸರ್ಕಾರಕ್ಕೆ ಸಲ್ಲಬೇಕು” ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಗಂಭೀರ ನಿರ್ಲಕ್ಷ್ಯ ನಡೆದಿದೆ ಎಂದು ಕಿಡಿಕಾರಿದರು. “ಬೆಂಗಳೂರು ನಗರದ ಗುಂಡಿ ಸಮಸ್ಯೆಯನ್ನು ಪರಿಹರಿಸಲು ಸಹ ಸರ್ಕಾರಕ್ಕೆ ಯೋಗ್ಯತೆ ಇಲ್ಲ” ಎಂದು ಅವರು ವ್ಯಂಗ್ಯವಾಡಿದರು.
ರಾಜ್ಯವನ್ನು ಅಭಿವೃದ್ಧಿ ಶೂನ್ಯವನ್ನಾಗಿಸಲಾಗಿದೆ ಎಂದು ಹೇಳಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತದ ‘ಅಸಲಿ ಬಣ್ಣ’ ಈಗ ಬಹಿರಂಗವಾಗಿದೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa