ಪಿಂಚಣಿ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮನವಿ
ಗದಗ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಹಿರಿಯ ನಾಗರಿಕರಿಗೆ ಕಳೆದ ಐದು ತಿಂಗಳಿನಿಂದ ಸರ್ಕಾರದ ಪಿಂಚಣಿ ಹಣ ಬಂದಿಲ್ಲವೆಂದು ಆರೋಪಿಸಿ, ತಕ್ಷಣವೇ ಪಿಂಚಣಿ ಬಿಡುಗಡೆ ಮಾಡುವಂತೆ ಜಯ ಕರ್ನಾಟಕ ಜನಪರ ವೇದಿಕೆಯ ಗದಗ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ವೇದಿಕೆಯ ರಾಜ್ಯ
ಫೋಟೋ


ಗದಗ, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಹಿರಿಯ ನಾಗರಿಕರಿಗೆ ಕಳೆದ ಐದು ತಿಂಗಳಿನಿಂದ ಸರ್ಕಾರದ ಪಿಂಚಣಿ ಹಣ ಬಂದಿಲ್ಲವೆಂದು ಆರೋಪಿಸಿ, ತಕ್ಷಣವೇ ಪಿಂಚಣಿ ಬಿಡುಗಡೆ ಮಾಡುವಂತೆ ಜಯ ಕರ್ನಾಟಕ ಜನಪರ ವೇದಿಕೆಯ ಗದಗ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಹಾಲಪ್ಪ ವರವಿ ಹಾಗೂ ಜಿಲ್ಲಾ ಅಧ್ಯಕ್ಷರಾದ ಸಣ್ಣಯಲಪ್ಪ ರಾಮಣ್ಣ ವಳಗೇರಿ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆಯನ್ನು ವಿವರಿಸಿದರು.

ಸಂದರ್ಭದಲ್ಲಿ ಮಾತನಾಡಿದ ಹಾಲಪ್ಪ ವರವಿ ಅವರು, ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯಾದ್ಯಂತ ಬಡವರು, ರೈತರು, ಮಹಿಳೆಯರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದು, ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಗದಗ ಜಿಲ್ಲೆಯ ಹಿರಿಯ ನಾಗರಿಕರಿಗೆ ಸುಮಾರು ಐದು ತಿಂಗಳಿನಿಂದ ಪಿಂಚಣಿ ಹಣ ಬಾರದಿರುವುದರಿಂದ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕರು ತಾಲೂಕು ಕಚೇರಿಗಳಿಗೆ ಅಲೆದಾಡುತ್ತಾ ಬೇಸತ್ತಿದ್ದಾರೆ. 60 ವರ್ಷ ಮೇಲ್ಪಟ್ಟ ಹಿರಿಯರಿಗೆ ಪಿಂಚಣಿ ಜೀವನಾಧಾರವಾಗಿದ್ದು, ಔಷಧಿ, ಆಹಾರ ಸೇರಿದಂತೆ ಮೂಲಭೂತ ಅಗತ್ಯಗಳನ್ನು ಪೂರೈಸಲು ಕಷ್ಟವಾಗುತ್ತಿದೆ ಎಂದು ತಿಳಿಸಿದರು.

ಆದ್ದರಿಂದ ತಕ್ಷಣವೇ ಬಾಕಿ ಪಿಂಚಣಿಯನ್ನು ಬಿಡುಗಡೆ ಮಾಡಿ ಹಿರಿಯ ನಾಗರಿಕರಿಗೆ ಸಹಾಯ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅಂಬರೀಶ್ ಗಡ್ಡಿ, ಜಗದೀಶ್ ಕರಡಿಗುಡ್ಡ, ವೀರೇಶ್ ಹಿರೇಮಠ, ಮಾರುತಿ ಹೊಂಬಳ, ವೆಂಕಟೇಶ್ ಶಾಂತಗಿರಿ, ಸಂತೋಷ ವಡ್ಡರ, ಪ್ರಕಾಶ್ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande