
ಬೆಂಗಳೂರು, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಹಿಳಾ ಮೀಸಲಾತಿ ಕಾಯ್ದೆಯನ್ನು ‘ವಿಮೆನ್ ರಿಸರ್ವೇಶನ್ ಬಿಲ್’ ಎಂದು ಕರೆಯದೆ ‘ನಾರಿ ಶಕ್ತಿ ವಂದನಾ ಅಧಿನಿಯಮ’ ಎಂಬ ಹೆಸರಿನಲ್ಲಿ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ. ಮಂಜುಳಾ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಹಿಳಾ ಸಬಲೀಕರಣದ ದಿಸೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜ್ಯಾದ್ಯಂತ 10 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆ, ಮಂಡಲ ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ಸಮಾವೇಶ, ಸಹಿ ಸಂಗ್ರಹ ಅಭಿಯಾನ ಮತ್ತು ಮಿಸ್ಡ್ ಕಾಲ್ ಅಭಿಯಾನಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಕಾಯ್ದೆಗೆ ಸಾರ್ವಜನಿಕ ಬೆಂಬಲವನ್ನು ವಿಸ್ತರಿಸುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa