ಮಹಿಳಾ ಮೀಸಲಾತಿ ; ಮೋದಿ ಸರ್ಕಾರ ಗಂಭೀರ ಕ್ರಮ : ಶೋಭಾ ಕರಂದ್ಲಾಜೆ
ಬೆಂಗಳೂರು, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಹಿಳಾ ಮೀಸಲಾತಿ ವಿಚಾರದಲ್ಲಿ ಹಿಂದಿನ ಅವಧಿಗಳಲ್ಲಿ ಸಮರ್ಪಕ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಬಿಲ್ ಕುರಿತು ಚರ್ಚೆಯಾದ ಸಂದರ
ಶೋಭಾ ಕರಂದ್ಲಾಜೆ


ಬೆಂಗಳೂರು, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಹಿಳಾ ಮೀಸಲಾತಿ ವಿಚಾರದಲ್ಲಿ ಹಿಂದಿನ ಅವಧಿಗಳಲ್ಲಿ ಸಮರ್ಪಕ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಬಿಲ್ ಕುರಿತು ಚರ್ಚೆಯಾದ ಸಂದರ್ಭದಲ್ಲಿ ಅದರ ಪ್ರತಿಯನ್ನು ಹರಿದು ಹಾಕಿದ ಘಟನೆ ನಡೆದಿತ್ತು. ಯುಪಿಎ ಸರ್ಕಾರದ ಅವಧಿಯಲ್ಲಿಯೂ ಈ ವಿಷಯದಲ್ಲಿ ಯಾವುದೇ ಗಂಭೀರ ಚಿಂತನೆ ಮಾಡಲಿಲ್ಲ ಎಂದು ಹೇಳಿದರು.

ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳಾ ಮೀಸಲಾತಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದರು.

‘ನಾರಿ ಶಕ್ತಿ ವಂದನಾ ಅಧಿನಿಯಮ’ ಜಾರಿಯಿಂದ ಆಡಳಿತಾತ್ಮಕ ಹಾಗೂ ನಿರ್ಣಯ ಪ್ರಕ್ರಿಯೆಯಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಳವಾಗಲಿದೆ. ಮಹಿಳಾ ಸಬಲೀಕರಣದ ದಿಸೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande