
ಬೆಳಗಾವಿ, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸಾರ್ವಜನಿಕರು ಮತ್ತು ಕಾರ್ಯಕರ್ತರಿಂದ ಅಹವಾಲುಗಳನ್ನು ಆಲಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಸಮಸ್ಯೆಗಳೊಂದಿಗೆ ಬಂದ ನಾಗರಿಕರು ತಮ್ಮ ಅಹವಾಲುಗಳನ್ನು ಮಂಡಿಸಿದ್ದು, ಅವುಗಳಿಗೆ ಸಚಿವರು ಸ್ಪಂದಿಸಿ ತಕ್ಷಣ ಪರಿಹಾರ ಸೂಚಿಸಿದರು. ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ ಅವರು, ಜನಸಾಮಾನ್ಯರ ಸಮಸ್ಯೆಗಳು ಶೀಘ್ರ ಪರಿಹಾರವಾಗುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa