“ಬ್ರ್ಯಾಂಡ್ ಬೆಂಗಳೂರು” ಬದಲು “ಬ್ಯಾಡ್ ಬೆಂಗಳೂರು”: ಬಿಜೆಪಿ
ಬೆಂಗಳೂರು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠೆ ಹಾಗೂ ಹೆಸರು-ಖ್ಯಾತಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಹಾನಿಗೊಳಗಾಗಿದೆ ಎಂದು ಬಿಜೆಪಿ ರಾಜ್ಯ ಘಟಕ ಗಂಭೀರ ಆರೋಪ ಮಾಡಿದೆ. “ಬ್ರ್ಯಾಂಡ್ ಬೆಂಗಳೂರು ನಿರ್ಮಿಸುತ್ತೇವೆ ಎಂದು ಹೇಳಿಕೊಂಡು ಬಂದ ಕಾಂಗ್ರೆಸ್ ಸರ
“ಬ್ರ್ಯಾಂಡ್ ಬೆಂಗಳೂರು” ಬದಲು “ಬ್ಯಾಡ್ ಬೆಂಗಳೂರು”: ಬಿಜೆಪಿ


ಬೆಂಗಳೂರು, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠೆ ಹಾಗೂ ಹೆಸರು-ಖ್ಯಾತಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಹಾನಿಗೊಳಗಾಗಿದೆ ಎಂದು ಬಿಜೆಪಿ

ರಾಜ್ಯ ಘಟಕ ಗಂಭೀರ ಆರೋಪ ಮಾಡಿದೆ.

“ಬ್ರ್ಯಾಂಡ್ ಬೆಂಗಳೂರು ನಿರ್ಮಿಸುತ್ತೇವೆ ಎಂದು ಹೇಳಿಕೊಂಡು ಬಂದ ಕಾಂಗ್ರೆಸ್ ಸರ್ಕಾರ, ವಾಸ್ತವದಲ್ಲಿ ಬೆಂಗಳೂರನ್ನು ‘ಬ್ಯಾಡ್ ಬೆಂಗಳೂರು’ ಆಗಿ ಪರಿವರ್ತಿಸಿದೆ” ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ನಗರದಲ್ಲಿ ಮೂಲಸೌಕರ್ಯ ಸಮಸ್ಯೆಗಳು, ರಸ್ತೆ ಗುಂಡಿಗಳು, ಸಂಚಾರ ದಟ್ಟಣೆ, ನೀರಿನ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳು ಹೆಚ್ಚುತ್ತಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತವೆ ಎಂದು ಪಕ್ಷ ಟೀಕಿಸಿದೆ.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ತೀವ್ರ ಟೀಕೆ ವ್ಯಕ್ತಪಡಿಸಿದ್ದು, ನಗರಾಭಿವೃದ್ಧಿ ವಿಚಾರದಲ್ಲಿ ಸಮರ್ಪಕ ಯೋಜನೆ ಹಾಗೂ ಕಾರ್ಯಗತಗೊಳಿಸುವಿಕೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ.

ನಗರದ ಜನಜೀವನಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿರುವ ಬಿಜೆಪಿ, ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆಯನ್ನು ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande