
ಬೆಂಗಳೂರು, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ನಟಸಾರ್ವಭೌಮ, ಕನ್ನಡ ಚಿತ್ರರಂಗದ ಧ್ರುವತಾರೆ, ಪದ್ಮಭೂಷಣ ಪುರಸ್ಕೃತ ಹಾಗೂ ಕರ್ನಾಟಕ ರತ್ನ ಡಾ. ರಾಜ್‌ಕುಮಾರ್ ಅವರ ಪುಣ್ಯಸ್ಮರಣೆಯ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೌರವ ನಮನ ಸಲ್ಲಿಸಿದ್ದಾರೆ.
ಈ ಕುರಿತು ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, “ನಾಡಿನ ನೆಲ-ಜಲ, ಭಾಷೆ ಮತ್ತು ಸಂಸ್ಕೃತಿಯ ಹಿತಕ್ಕಾಗಿ ಶ್ರಮಿಸಿದ ಬಂಗಾರದ ಮನುಷ್ಯ ಡಾ. ರಾಜ್‌ಕುಮಾರ್ ಅವರು ಪ್ರತಿಯೊಬ್ಬ ಕನ್ನಡಿಗನ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ” ಎಂದು ಶಿವಕುಮಾರ್ ತಿಳಿಸಿದ್ದಾರೆ.
ದಶಕಗಳ ಕಾಲ ವೈವಿಧ್ಯಮಯ ಪಾತ್ರಗಳ ಮೂಲಕ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ರಾಜ್‌ಕುಮಾರ್ ಕಲಾ ಸೇವೆ ಅಪಾರವಾಗಿದ್ದು, ಅವರ ಸಾಧನೆಗಳು ಕನ್ನಡ ಸಂಸ್ಕೃತಿಗೆ ಅಮೂಲ್ಯವಾದ ಕೊಡುಗೆಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಡಾ. ರಾಜ್‌ಕುಮಾರ್ ಅವರ ಆದರ್ಶಗಳು, ಮೌಲ್ಯಗಳು ಹಾಗೂ ಕಲಾತ್ಮಕ ಪರಂಪರೆ ಮುಂದಿನ ಪೀಳಿಗೆಗಳಿಗೆ ದಾರಿದೀಪವಾಗಿದ್ದು, ಅವರ ಸ್ಮರಣೆ ಸದಾಕಾಲವೂ ಜೀವಂತವಾಗಿರಲಿದೆ ಎಂದು ಶಿವಕುಮಾರ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa