
ಬೆಂಗಳೂರು, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಲ್ಪಸಂಖ್ಯಾತ ವಿಭಾಗದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ವಿಭಾಗದ ಅಧ್ಯಕ್ಷರಾಗಿದ್ದ ಕೆ. ಅಬ್ದುಲ್ ಜಬರ್ ಅವರ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.
ಇದರೊಂದಿಗೆ ಅಲ್ಪಸಂಖ್ಯಾತ ಘಟಕದ ರಾಜ್ಯ, ಜಿಲ್ಲಾ ಹಾಗೂ ವಿಧಾನಸಭೆ/ಬ್ಲಾಕ್ ಮಟ್ಟದಲ್ಲಿ ರಚಿಸಲಾದ ಎಲ್ಲಾ ಸಮಿತಿಗಳನ್ನು ವಿಸರ್ಜಿಸಲಾಗಿದೆ ಎಂದು ತಿಳಿಸಲಾಗಿದೆ.
ಘಟಕದ ಪುನರ್ರಚನೆಗಾಗಿ ಮುಂದಿನ ಹಂತದಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಹೊಸ ಸಮಿತಿಯನ್ನು ರಚಿಸಲಾಗುವುದು ಎಂದು ಕೆಪಿಸಿಸಿ ಸ್ಪಷ್ಟಪಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa