ವಿಶೇಷ ಆರೋಗ್ಯ ಶಿಬಿರಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ
ಬೆಂಗಳೂರು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ಓಕಲೀಪುರದಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಆಯೋಜಿಸಲಾಗಿದ್ದ ವಿಶೇಷ ಆರೋಗ್ಯ ಶಿಬಿರಕ್ಕೆ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ವೇಗದ ಜೀವನಶೈಲಿಯ
ವಿಶೇಷ ಆರೋಗ್ಯ ಶಿಬಿರಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ


ಬೆಂಗಳೂರು, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ಓಕಲೀಪುರದಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಆಯೋಜಿಸಲಾಗಿದ್ದ ವಿಶೇಷ ಆರೋಗ್ಯ ಶಿಬಿರಕ್ಕೆ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ವೇಗದ ಜೀವನಶೈಲಿಯಲ್ಲಿ ಮಾನಸಿಕ ಒತ್ತಡ ಹಾಗೂ ದೈಹಿಕ ಅನಾರೋಗ್ಯ ಸಾಮಾನ್ಯ ಸಮಸ್ಯೆಗಳಾಗಿ ಪರಿಣಮಿಸಿರುವುದಾಗಿ ತಿಳಿಸಿದರು. ಈ ಹಿನ್ನೆಲೆ, ಇಂತಹ ಆರೋಗ್ಯ ಶಿಬಿರಗಳು ಸಾರ್ವಜನಿಕರಿಗೆ ಬಹಳ ಉಪಯುಕ್ತವಾಗಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪಡೆಯಲು ಸಹಕಾರಿ ಎಂದು ಹೇಳಿದರು.

ಶಿಬಿರದಲ್ಲಿ ಅಳವಡಿಸಲಾಗಿರುವ ಆಧುನಿಕ ತಂತ್ರಜ್ಞಾನಾಧಾರಿತ ಯಂತ್ರಗಳು ದೀರ್ಘಕಾಲದ ಕೈಕಾಲು ನೋವು ಹಾಗೂ ದೇಹದ ಇತರೆ ನೋವುಗಳನ್ನು ನಿವಾರಿಸುವಲ್ಲಿ ಪರಿಣಾಮಕಾರಿಯಾಗಿವೆ ಎಂದು ಸಚಿವರು ಹೇಳಿದರು.

ಕ್ಷೇತ್ರದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಶಿಬಿರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande