ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿದ ಸಚಿವ ಎಚ್.ಕೆ. ಪಾಟೀಲ್
ಗದಗ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿರುವ ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಸಂಸ್ಥೆ ಆವರಣದಲ್ಲಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸಾರ್ವಜನಿಕರೊಂದಿಗೆ ಜನಸಂಪರ್ಕ ಕಾರ್ಯಕ್ರಮ ನಡೆಸಿ, ಜನರ ಸಮಸ್ಯೆಗಳನ್ನು ಆಲಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಗ್ರಾಮಸ್ಥ
ಫೋಟೋ


ಗದಗ, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿರುವ ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಸಂಸ್ಥೆ ಆವರಣದಲ್ಲಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸಾರ್ವಜನಿಕರೊಂದಿಗೆ ಜನಸಂಪರ್ಕ ಕಾರ್ಯಕ್ರಮ ನಡೆಸಿ, ಜನರ ಸಮಸ್ಯೆಗಳನ್ನು ಆಲಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಗ್ರಾಮಸ್ಥರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳು, ಬೇಡಿಕೆಗಳು ಮತ್ತು ಮನವಿಗಳನ್ನು ಸಚಿವರ ಮುಂದಿಟ್ಟರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸ್ಥಳದಲ್ಲೇ ಕರೆಯಿಸಿ ಚರ್ಚೆ ನಡೆಸಿದ ಸಚಿವರು, ಹಲವು ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಸೂಚನೆಗಳನ್ನು ನೀಡಿದರು.

ಇದೇ ವೇಳೆ, ಶಾಲಾ ಮಕ್ಕಳಿಗಾಗಿ ನಿರ್ಮಾಣವಾಗುತ್ತಿರುವ ಶೌಚಾಲಯ ಕಟ್ಟಡ ಕಾಮಗಾರಿಯ ಪ್ರಗತಿ ಕುರಿತು ಅಧಿಕಾರಿಗಳು ಹಾಗೂ ಅಭಿಯಂತರರೊಂದಿಗೆ ಪರಿಶೀಲನೆ ನಡೆಸಿದ ಸಚಿವರು, ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ, ಶೀಘ್ರ ಪರಿಹಾರ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande