
ತುಮಕೂರು, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಥರಟಿ ಗ್ರಾಮದಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಡಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಸಚಿವ ವಿ. ಸೋಮಣ್ಣ ಅವರು ಭಾಗವಹಿಸಿ, ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಈ ಘಟಕದಿಂದ ಸ್ಥಳೀಯರಿಗೆ ಬಹಳ ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕೊರಟಗೆರೆಯ ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಸಹಾಯಕ ಜಿಲ್ಲಾಧಿಕಾರಿ ಶಿವಪ್ಪ, ತಹಶೀಲ್ದಾರ ಮಂಜುನಾಥ್, ತಾಲ್ಲೂಕು ಬಿಜೆಪಿ ನಿಕಟಪೂರ್ವ ಅಧ್ಯಕ್ಷ ದರ್ಶನ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕಾಮರಾಜು ಸೇರಿದಂತೆ ಹಲವು ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa