
ನವದೆಹಲಿ, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ವಿಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿ, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಆಶಾ ಭೋಂಸ್ಲೆ ಅವರ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿಯಿಂದ ತಾವು ಚಿಂತಿತರಾಗಿರುವುದಾಗಿ ತಿಳಿಸಿದ್ದಾರೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಗುಣಮುಖತೆಗೆ ಪ್ರಾರ್ಥಿಸುತ್ತಿದ್ದೇನೆ ಎಂದು ಅವರು ಬರೆದಿದ್ದಾರೆ.
1933ರ ಸೆಪ್ಟೆಂಬರ್ 8ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಜನಿಸಿದ ಆಶಾ ಭೋಂಸ್ಲೆ, ಭಾರತೀಯ ಸಂಗೀತ ಕ್ಷೇತ್ರದಲ್ಲಿ ಅಪ್ರತಿಮ ಸ್ಥಾನ ಪಡೆದಿದ್ದಾರೆ. 1940ರ ದಶಕದಲ್ಲಿ ತಮ್ಮ ಗಾಯನ ವೃತ್ತಿಜೀವನ ಆರಂಭಿಸಿದ ಅವರು, 1943ರಲ್ಲಿ ಮರಾಠಿ ಚಲನಚಿತ್ರದ ಮೂಲಕ ಗಾಯನ ಪ್ರವೇಶ ಮಾಡಿ, 1948ರಲ್ಲಿ ಹಿಂದಿ ಚಿತ್ರರಂಗದಲ್ಲೂ ತಮ್ಮದೇ ಗುರುತು ಮೂಡಿಸಿಕೊಂಡರು.
ಹಿಂದಿ ಸೇರಿದಂತೆ ಮರಾಠಿ, ಬಂಗಾಳಿ, ಗುಜರಾತಿ, ಪಂಜಾಬಿ, ತಮಿಳು, ಮಲಯಾಳಂ, ಇಂಗ್ಲಿಷ್ ಮತ್ತು ರಷ್ಯನ್ ಭಾಷೆಗಳಲ್ಲೂ 20,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಆಶಾ ಭೋಂಸ್ಲೆ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, ಪದ್ಮವಿಭೂಷಣ, ಪದ್ಮಭೂಷಣ ಸೇರಿದಂತೆ ಅನೇಕ ಗಣ್ಯ ಗೌರವಗಳಿಗೆ ಪಾತ್ರರಾಗಿದ್ದಾರೆ. ಜೊತೆಗೆ ಹಲವಾರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು ಫಿಲ್ಮ್ಫೇರ್ ಪ್ರಶಸ್ತಿಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa