ಆಶಾ ಭೋಂಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಂಸ್ಲೆ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ ಖಾತೆ ಸಂತಾಪ ಸಂದೇಶದಲ್ಲಿ, “ಭಾರತ ಕಂಡ ಅತ್ಯಂತ ಪ್ರತಿಮಾರೂಪದ ಹಾಗೂ ಬಹುಮುಖ ಪ್ರತಿಭೆಯ ಧ್ವನಿಗಳಲ್ಲಿ ಒಬ
File photo


ನವದೆಹಲಿ, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಂಸ್ಲೆ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಎಕ್ಸ ಖಾತೆ ಸಂತಾಪ ಸಂದೇಶದಲ್ಲಿ, “ಭಾರತ ಕಂಡ ಅತ್ಯಂತ ಪ್ರತಿಮಾರೂಪದ ಹಾಗೂ ಬಹುಮುಖ ಪ್ರತಿಭೆಯ ಧ್ವನಿಗಳಲ್ಲಿ ಒಬ್ಬರಾದ ಆಶಾ ಭೋಂಸ್ಲೆ ಜಿ ಅವರ ನಿಧನದಿಂದ ನನಗೆ ಆಳವಾದ ದುಃಖವಾಗಿದೆ. ದಶಕಗಳ ಕಾಲದ ಅವರ ಅದ್ಭುತ ಸಂಗೀತ ಪಯಣ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದ್ದು, ಜಗತ್ತಿನಾದ್ಯಂತ ಅನೇಕ ಹೃದಯಗಳನ್ನು ಸ್ಪರ್ಶಿಸಿದೆ,” ಎಂದು ಹೇಳಿದ್ದಾರೆ.

“ಭಾವಪೂರ್ಣ ಗೀತೆಗಳಾಗಲಿ ಅಥವಾ ಉತ್ಸಾಹಭರಿತ ಹಾಡುಗಳಾಗಲಿ, ಅವರ ಧ್ವನಿಗೆ ಕಾಲಾತೀತ ಮೌಲ್ಯವಿತ್ತು. ಅವರೊಂದಿಗೆ ನಡೆಸಿದ ಸಂವಾದಗಳನ್ನು ನಾನು ಸದಾ ಸ್ಮರಿಸುತ್ತೇನೆ,” ಎಂದು ಪ್ರಧಾನಿ ತಿಳಿಸಿದ್ದಾರೆ.

ಇದಲ್ಲದೆ, ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಹಾಗೂ ಸಂಗೀತ ಪ್ರಿಯರಿಗೆ ಸಂತಾಪ ಸೂಚಿಸಿರುವ ಪ್ರಧಾನಿ, “ಆಶಾ ಭೋಂಸ್ಲೆ ಅವರು ಮುಂದಿನ ಪೀಳಿಗೆಗಳಿಗೆ ಸದಾ ಸ್ಫೂರ್ತಿಯಾಗಿದ್ದು, ಅವರ ಹಾಡುಗಳು ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ,” ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande