ಭದ್ರಾವತಿಯಲ್ಲಿ ಪೊಲೀಸ್ ರೂಟ್ ಮಾರ್ಚ್ ; ರೌಡಿಗಳಿಗೆ ಎಚ್ಚರಿಕೆ
ಭದ್ರಾವತಿ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭದ್ರಾವತಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭದ್ರಾವತಿ ನ್ಯೂ ಟೌನ್ ಪೋಲಿಸ್ ಸ್ಟೆಷನ್ ವ್ಯಾಪ್ತಿಯಲ್ಲಿ ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿಯಿಂದ ಭಾನುವಾರ ರೂಟ್ ಮಾರ್ಚ್ ನಡೆಸಲಾಯಿತು. ಠಾಣಾ ವ್ಯಾಪ್ತಿಯ ಪ್ರಮುಖ ಪ್ರದೇಶಗಳಲ್ಲಿ ನಡ
Route march


ಭದ್ರಾವತಿ, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭದ್ರಾವತಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭದ್ರಾವತಿ ನ್ಯೂ ಟೌನ್ ಪೋಲಿಸ್ ಸ್ಟೆಷನ್ ವ್ಯಾಪ್ತಿಯಲ್ಲಿ ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿಯಿಂದ ಭಾನುವಾರ ರೂಟ್ ಮಾರ್ಚ್ ನಡೆಸಲಾಯಿತು.

ಠಾಣಾ ವ್ಯಾಪ್ತಿಯ ಪ್ರಮುಖ ಪ್ರದೇಶಗಳಲ್ಲಿ ನಡೆದ ರೂಟ್ ಮಾರ್ಚ್ ವೇಳೆ ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವ ಜೊತೆಗೆ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವ ಸಂದೇಶ ನೀಡಲಾಯಿತು. ಈ ಸಂದರ್ಭದಲ್ಲಿ ರೌಡಿಗಳ ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ, ಅವರ ನಡೆ-ನುಡಿಗಳನ್ನು ಪರಿಶೀಲಿಸಲಾಯಿತು.

ಪೊಲೀಸರು ಸಂಬಂಧಪಟ್ಟವರಿಗೆ ಕಠಿಣ ಎಚ್ಚರಿಕೆ ನೀಡಿದ್ದು, ಅವರ ಚಲನ-ವಲನಗಳ ಮೇಲೆ ನಿಗಾವಹಿಸಲಾಗುತ್ತಿದೆ ಎಂದು ತಿಳಿಸಿದರು. ಕಾನೂನು ಉಲ್ಲಂಘನೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande