ಶಿವಮೊಗ್ಗ ಗಾಂಧಿ ಬಜಾರ್ ವ್ಯಾಪಾರಿಗಳಿಗೆ ಪೊಲೀಸರ ಎಚ್ಚರಿಕೆ
ಶಿವಮೊಗ್ಗ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ನಗರದ ಗಾಂಧಿ ಬಜಾರ್ ಪ್ರದೇಶದಲ್ಲಿರುವ ಅಂಗಡಿಗಳಿಗೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚನೆ ನೀಡಿದ್ದಾರೆ. ಪಿಐ ನೇತೃತ್ವದಲ್ಲಿ ನಡೆದ ಪರಿಶೀಲನೆ ವೇಳೆ ಅಂಗಡಿಗಳಲ್ಲಿ ಕಡ್ಡಾಯ
Visit


ಶಿವಮೊಗ್ಗ, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ನಗರದ ಗಾಂಧಿ ಬಜಾರ್ ಪ್ರದೇಶದಲ್ಲಿರುವ ಅಂಗಡಿಗಳಿಗೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚನೆ ನೀಡಿದ್ದಾರೆ.

ಪಿಐ ನೇತೃತ್ವದಲ್ಲಿ ನಡೆದ ಪರಿಶೀಲನೆ ವೇಳೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು ಹಾಗೂ ಸುರಕ್ಷತೆಯ ದೃಷ್ಟಿಯಿಂದ ಸೆಕ್ಯೂರಿಟಿ ಗಾರ್ಡ್ಗಳನ್ನು ನೇಮಿಸಬೇಕು ಎಂದು ನೋಟಿಸ್ ಜಾರಿ ಮಾಡಲಾಗಿದೆ. ಜೊತೆಗೆ, ಕಳ್ಳತನ ಮತ್ತು ಅನಾಹುತಗಳನ್ನು ತಡೆಗಟ್ಟುವ ಉದ್ದೇಶದಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ವ್ಯಾಪಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.

ನಗರದಲ್ಲಿ ಹೆಚ್ಚುತ್ತಿರುವ ಭದ್ರತಾ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದ್ದು, ವ್ಯಾಪಾರಿಗಳು ಪೊಲೀಸರ ಸೂಚನೆಗಳನ್ನು ಪಾಲಿಸುವ ಮೂಲಕ ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande