ನಾರಿ ಶಕ್ತಿ ವಂದನಾ ಅಧಿನಿಯಮ ಬೆಂಬಲಿಸಿ ಸಹಿ ಸಂಗ್ರಹ ಅಭಿಯಾನ
ಬೆಂಗಳೂರು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಹಿಳೆಯರಿಗೆ ಲೋಕಸಭೆ ಹಾಗೂ ರಾಜ್ಯಗಳ ವಿಧಾನ ಸಭೆಗಳಲ್ಲಿ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನಾ ಅಧಿನಿಯಮ್’ ಬೆಂಬಲಿಸಿ ಬೆಂಗಳೂರಿನಲ್ಲಿ ಇಂದು ಸಹಿ ಸಂಗ್ರಹ ಅಭಿಯಾನ ನಡೆಯಿತು. ಈ ಅಭಿಯಾನದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗ
ಶೋಭಾ ಕರಂದ್ಲಾಜೆ


ಬೆಂಗಳೂರು, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಹಿಳೆಯರಿಗೆ ಲೋಕಸಭೆ ಹಾಗೂ ರಾಜ್ಯಗಳ ವಿಧಾನ ಸಭೆಗಳಲ್ಲಿ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನಾ ಅಧಿನಿಯಮ್’ ಬೆಂಬಲಿಸಿ ಬೆಂಗಳೂರಿನಲ್ಲಿ ಇಂದು ಸಹಿ ಸಂಗ್ರಹ ಅಭಿಯಾನ ನಡೆಯಿತು. ಈ ಅಭಿಯಾನದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿ ಮಹಿಳಾ ಸಬಲೀಕರಣದ ಅಗತ್ಯತೆಯನ್ನು ಒತ್ತಿ ಹೇಳಿದರು.

ಈ ವೇಳೆ ಮಾತನಾಡಿದ ಅವರು, ದೇಶದ ರಾಜಕೀಯ ವ್ಯವಸ್ಥೆ ಹಾಗೂ ಆಡಳಿತದ ನಾಯಕತ್ವದಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸಲು ಈ ಮಸೂದೆ ಅತ್ಯಂತ ಮಹತ್ವದ್ದಾಗಿದೆ ಎಂದರು. ಮಹಿಳೆಯರಿಗೆ ಸಮಾನ ಅವಕಾಶ ಒದಗಿಸುವ ನಿಟ್ಟಿನಲ್ಲಿ ಈ ಅಧಿನಿಯಮ ಮಹತ್ವದ ಹೆಜ್ಜೆಯಾಗಿದ್ದು, ಇದರ ಜಾರಿಯಿಂದ ಮಹಿಳಾ ಪ್ರತಿನಿಧಿತ್ವ ಹೆಚ್ಚಳವಾಗಲಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದ್ದು, ‘ನಾರಿ ಶಕ್ತಿ ವಂದನಾ ಅಧಿನಿಯಮ್’ ಜಾರಿಗೆ ತರುತ್ತಿರುವುದು ದೇಶದ ಹೆಮ್ಮೆ ಎಂದು ಹೇಳಿದರು.

ದೇಶದ ಸಮಸ್ತ ಮಹಿಳೆಯರು ಈ ಅಧಿನಿಯಮವನ್ನು ಬೆಂಬಲಿಸಿ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande