
ವಿಜಯನಗರ, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಪಂಚಮಸಾಲಿ ಭವನದಲ್ಲಿ ಸಮಾಜಮುಖಿ ಚಿಂತಕ, ಹಿರಿಯ ಸಮಾಜಸೇವಕ ಬಾವಿ ಬೆಟ್ಟಪ್ಪ ಅವರ 80ನೇ ಜನ್ಮದಿನೋತ್ಸವ, 50ನೇ ವಿವಾಹ ವಾರ್ಷಿಕೋತ್ಸವ ಹಾಗೂ ಅವರ ಜೀವನ ಸಾಧನೆಯನ್ನು ಪ್ರತಿಬಿಂಬಿಸುವ “ಸಂಭ್ರಮ” ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ಭವ್ಯವಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಶಿವಾನಂದ ಪಾಟೀಲ ಅವರು ಮಾತನಾಡಿ, “ಬಾವಿ ಬೆಟ್ಟಪ್ಪನವರು ಕೇವಲ ವ್ಯಕ್ತಿಯಲ್ಲ, ಒಂದು ಶಕ್ತಿ. ಕೃಷಿ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರ ಸೇವೆ ಅಪಾರವಾಗಿದೆ” ಎಂದು ಕೊಂಡಾಡಿದರು. ಹಗರಿಬೊಮ್ಮನಹಳ್ಳಿ ಭಾಗದ ಶೈಕ್ಷಣಿಕ ಅಭಿವೃದ್ಧಿ ಹಾಗೂ ಸಹಕಾರಿ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಸ್ಮರಣೀಯ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಶಾಸಕ ನೇಮಿರಾಜ ನಾಯಕ, ಮಾಜಿ ಸಂಸದ ಕರಡಿ ಸಂಗಣ್ಣ, ಮಾಜಿ ಸಚಿವ ಎನ್.ಎಂ. ನಬಿ, ಪಿ.ಟಿ. ಪರಮೇಶ್ವರ ನಾಯಕ, ಎಲ್. ಭೀಮಾ ನಾಯಕ ಸೇರಿದಂತೆ ಅನೇಕ ಜನಪ್ರತಿನಿಧಿಗಳು, ಅಭಿಮಾನಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa