ಬಾಗಲಕೋಟೆ ; ಸ್ಟ್ರಾಂಗ್ ರೂಮ್ ಭದ್ರತೆಗೆ ಕಠಿಣ ಸೂಚನೆ
ಬಾಗಲಕೋಟೆ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮತಪೆಟ್ಟಿಗೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿರುವ ಸ್ಟ್ರಾಂಗ್ ರೂಮ್ಗಳ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಕರ್ತವ್ಯ ನಿರ್ವಹಣೆಗೆ ನಿಯೋಜಿಸಲಾದ ಅಧಿಕಾರಿ ಹಾಗ
Security


ಬಾಗಲಕೋಟೆ, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮತಪೆಟ್ಟಿಗೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿರುವ ಸ್ಟ್ರಾಂಗ್ ರೂಮ್ಗಳ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಕರ್ತವ್ಯ ನಿರ್ವಹಣೆಗೆ ನಿಯೋಜಿಸಲಾದ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೂಕ್ತ ಮಾರ್ಗಸೂಚಿಗಳನ್ನು ನೀಡಿದ್ದಾರೆ.

ಭದ್ರತೆ ದೃಷ್ಟಿಯಿಂದ ಸ್ಟ್ರಾಂಗ್ ರೂಮ್ ಪ್ರದೇಶದಲ್ಲಿ 24x7 ಪೊಲೀಸ್ ಕಾವಲು, ಸಿಸಿಟಿವಿ ನಿಗಾವ್ಯವಸ್ಥೆ, ಪ್ರವೇಶ ನಿಯಂತ್ರಣ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಅನಧಿಕೃತ ಪ್ರವೇಶಕ್ಕೆ ಯಾವುದೇ ಅವಕಾಶ ನೀಡದಂತೆ ಎಚ್ಚರಿಕೆ ವಹಿಸುವುದರ ಜೊತೆಗೆ, ಶಿಫ್ಟ್ವಾರು ಕರ್ತವ್ಯ ನಿರ್ವಹಣೆ ವೇಳೆ ಜವಾಬ್ದಾರಿತನದಿಂದ ಕಾರ್ಯನಿರ್ವಹಿಸಲು ಅಧಿಕಾರಿಗಳು ಸಿಬ್ಬಂದಿಗೆ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande