ರಾಜ್ಯದಲ್ಲಿ ಮುಂದಿನ 7 ದಿನ ಬಿಸಿಲು, ಮಳೆ ಮುನ್ಸೂಚನೆ
ಬೆಂಗಳೂರು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡು ಬರುವ ಸಾಧ್ಯತ
ರಾಜ್ಯದಲ್ಲಿ ಮುಂದಿನ 7 ದಿನ ಬಿಸಿಲು, ಮಳೆ ಮುನ್ಸೂಚನೆ


ಬೆಂಗಳೂರು, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.

ಮಧ್ಯಾಹ್ನ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡು ಬರುವ ಸಾಧ್ಯತೆ ಇದ್ದು, ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಇಂದು ಬಿಸಿ ಗಾಳಿ ಹಾಗೂ ಆರ್ದ್ರತೆ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ.

ಏಪ್ರಿಲ್ 13ರಿಂದ 15ರವರೆಗೆ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು–ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಏಪ್ರಿಲ್ 14 ಮತ್ತು 15ರಂದು ಇಂತಹ ಮಳೆಯ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಇನ್ನುಳಿದ ದಿನಗಳಲ್ಲಿ ಮತ್ತೆ ಒಣ ಹವೆ ಮುಂದುವರಿಯುವ ಸಾಧ್ಯತೆ ಇದ್ದು, ಬಿಸಿಲಿನ ತೀವ್ರತೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande