
ಬೆಂಗಳೂರು, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಶ್ವ ಆರೋಗ್ಯ ದಿನದ ಅಂಗವಾಗಿ ವಿಜಯನಗರ–ಚಂದ್ರಾ ಲೇಔಟ್ ನಾಗರಭಾವಿ ವೈದ್ಯರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಲಾದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಸಚಿವ ವಿ. ಸೋಮಣ್ಣ ಭಾಗವಹಿಸಿ, ವೈದ್ಯರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಪಾತ್ರ ಅಪಾರವಾಗಿದ್ದು, ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯವೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಬಿಬಿಎಂಪಿ ಸದಸ್ಯ ಡಾ. ರಾಜು ಸೇರಿದಂತೆ ಸಂಘದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa