
ತುಮಕೂರು, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮದಲ್ಲಿಂದು ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ ನೆರವೇರಿಸಿದರು.
ಕಾರ್ಯಕ್ರಮದ ವೇಳೆ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ಭೂದಾನ ನೀಡಿದ ದೊಡ್ಡಯ್ಯ ಹಾಗೂ ಅವರ ಕುಟುಂಬಸ್ಥರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊರಟಗೆರೆಯ ಮಾಜಿ ಶಾಸಕರಾದ ಸುಧಾಕರ ಲಾಲ್, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಸಹಾಯಕ ಜಿಲ್ಲಾಧಿಕಾರಿ ಶಿವಪ್ಪ, ತಹಶೀಲ್ದಾರ ಮಂಜುನಾಥ, ತಾಲ್ಲೂಕು ಬಿಜೆಪಿ ನಿಕಟಪೂರ್ವ ಅಧ್ಯಕ್ಷ ದರ್ಶನ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕಾಮರಾಜು ಸೇರಿದಂತೆ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa