
ಬೀದರ್, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೀದರ ಜಿಲ್ಲೆಯ ಲಖನಗಾವ್ ಗ್ರಾಮದಿಂದ ಹೊರಂಡಿ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ₹1 ಕೋಟಿ 70 ಲಕ್ಷ ಅನುದಾನದಡಿ ಭೂಮಿ ಪೂಜೆಯನ್ನು ಸಚಿವ ಈಶ್ವರ ಖಂಡ್ರೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಉತ್ತಮ ರಸ್ತೆ ಸಂಪರ್ಕ ಅತ್ಯಂತ ಅಗತ್ಯವಿದ್ದು, ಈ ರಸ್ತೆ ನಿರ್ಮಾಣದಿಂದ ಲಖನಗಾವ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು. ವಿಶೇಷವಾಗಿ ರೈತರಿಗೆ ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ನೀಡುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಗ್ಯಾರಂಟಿಗಳಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂಬ ವಿರೋಧ ಪಕ್ಷದ ಆರೋಪಗಳಿಗೆ ಉತ್ತರವಾಗಿ, ಗ್ಯಾರಂಟಿ ಯೋಜನೆಗಳ ಜತೆಗೆ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa