
ಬೆಂಗಳೂರು, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (ಎಂಪಿಎಲ್ಯಾಡ್ಸ್) ಅನುದಾನದಡಿಯಲ್ಲಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಲಭ್ಯತೆ ಅತ್ಯಂತ ಅಗತ್ಯವಾಗಿದ್ದು, ಈ ಘಟಕ ನಿರ್ಮಾಣದಿಂದ ಸ್ಥಳೀಯ ನಿವಾಸಿಗಳಿಗೆ ಗುಣಮಟ್ಟದ ನೀರು ದೊರೆಯಲಿದೆ ಎಂದು ಹೇಳಿದರು. ಜೊತೆಗೆ, ನೀರಿನ ಮೂಲಸೌಕರ್ಯಗಳನ್ನು ಬಲಪಡಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa