
ಗದಗ, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ರವರ 135ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನರಾಮ್ರವರ 119ನೇ ಜನ್ಮ ದಿನಾಚರಣೆಯ ನಿಮಿತ್ಯ ಮುಂಜಾನೆ 9.00 ಗಂಟೆಗೆ ಗದಗ ಬೆಟಗೇರಿ ನಗರಸಭೆ ಆವರಣದಿಂದ ಮೆರವಣಿಗೆಯು ಗಾಂಧಿ ಸರ್ಕಲ್, ಮಹೇಂದ್ರಕರ ಸರ್ಕಲ್, ಟಾಂಗಾ ಕೂಟ್, ಬಸವೇಶ್ವರ ಸರ್ಕಲ್, ಜೋಡುಮಾರುತಿ ದೇವಸ್ಥಾನ, ಪ್ರವಾಸಿ ಮಂದಿರ, ಮುಳಗುಂದ ನಾಕಾ ಮುಖಾಂತರ ಡಾ.ಬಿ,ಆರ್ ಅಂಬೇಡ್ಕರ ಭವನವನ್ನು ಮದ್ಯಾಹ್ನ 12.00 ಗಂಟೆಗೆ ಮೆರವಣಿಗೆ ತಲುಪಲಿದೆ. ನಂತರ ವೇದಿಕೆ ಕಾರ್ಯಕ್ರಮ ಜರುಗಲಿದೆ.
ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಗೌರವಾನ್ವಿತ ಜನಪ್ರತಿನಿದಿಗಳು, ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಹಿಂದುಳಿದ ವರ್ಗ/ಅಲ್ಪಸಂಖ್ಯಾತ ವರ್ಗಗಳ ಸಮಾಜದ ಮುಖಂಡರು, ಸರ್ವಸದಸ್ಯರು, ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP