ಯೂನಿಫಾರ್ಮ್ ಸೇವೆಗಳಿಗೆ ಉಚಿತ ತರಬೇತಿ, ಏ.27 ಕೊನೆಯ ದಿನ
ಗದಗ, 13 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಸೇನೆ ಸೇರಿದಂತೆ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಲು ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸುವರ್ಣಾವಕಾಶ ಒದಗಿಸಲಾಗಿದೆ. ಆಯ್ಕೆಯ ಪೂರ್ವಸಿದ್ಧತೆಗಾಗಿ ವೃತ್ತಿ ಮಾರ್ಗದರ್ಶನ ಹಾಗೂ ತ
ಫೋಟೋ


ಗದಗ, 13 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತೀಯ ಸೇನೆ ಸೇರಿದಂತೆ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಲು ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸುವರ್ಣಾವಕಾಶ ಒದಗಿಸಲಾಗಿದೆ.

ಆಯ್ಕೆಯ ಪೂರ್ವಸಿದ್ಧತೆಗಾಗಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತಮ್ಮ ತಮ್ಮ ಜಿಲ್ಲೆಯ ಜಿಲ್ಲಾ ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಬೇಕು. ಭರ್ತಿಯಾದ ಅರ್ಜಿಯನ್ನು ಸಂಬಂಧಿತ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಇದಲ್ಲದೆ, ಇಲಾಖೆಯ ಅಧಿಕೃತ ವೆಬ್ಸೈಟ್ನಿಂದಲೂ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸೂಚಿಸಿದ ವಿಳಾಸಕ್ಕೆ ಕಳುಹಿಸುವ ಅವಕಾಶವಿದೆ.

ಅರ್ಜಿ ಸಲ್ಲಿಸಲು 2026 ಏಪ್ರಿಲ್ 27 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ಸಮಯ ವ್ಯರ್ಥ ಮಾಡದೇ ಅರ್ಜಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande