
ನವದೆಹಲಿ, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಹುತಾತ್ಮರನ್ನು ಸ್ಮರಿಸಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, “ಈ ದಿನದಂದು, ನಾವು ಜಲಿಯನ್ ವಾಲಾಬಾಗ್ ಹತ್ಯಾಕಾಂಡನ ಕೆಚ್ಚೆದೆಯ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸುತ್ತೇವೆ. ಅವರ ತ್ಯಾಗವು ನಮ್ಮ ಜನರ ಅದಮ್ಯ ಚೈತನ್ಯದ ಪ್ರಬಲ ಜ್ಞಾಪನೆಯಾಗಿದೆ. ಅವರು ಪ್ರದರ್ಶಿಸಿದ ಧೈರ್ಯ ಮತ್ತು ದೃಢಸಂಕಲ್ಪವು ಪೀಳಿಗೆಗೆ ಸ್ವಾತಂತ್ರ್ಯ, ನ್ಯಾಯ ಮತ್ತು ಘನತೆಯ ಮೌಲ್ಯಗಳನ್ನು ಎತ್ತಿಹಿಡಿಯಲು ಸ್ಫೂರ್ತಿ ನೀಡುತ್ತದೆ,” ಎಂದು ಪ್ರಧಾನಿ ಹೇಳಿದ್ದಾರೆ.
1919ರಲ್ಲಿ ಅಮೃತಸರದ ಜಲಿಯನ್ ವಾಲಾಬಾಗ್ನಲ್ಲಿ ನಡೆದ ಈ ಕ್ರೂರ ಘಟನೆ ಭಾರತೀಯ ಸ್ವಾತಂತ್ರ್ಯ ಹೋರಾಟದ ಮಹತ್ವದ ಘಟ್ಟವಾಗಿದ್ದು, ಅನೇಕ ನಿರಪರಾಧಿಗಳ ಬಲಿದಾನ ದೇಶದ ಇತಿಹಾಸದಲ್ಲಿ ಅಚ್ಚಳಿಯದ ಗುರುತು ಮೂಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa