ಮೇ 10 ರಿಂದ 14 ರವರೆಗೆ ಶ್ರೀ ಹುಲಿಗೆಮ್ಮ ಜಾತ್ರಾ ಪೂರ್ವಭಾವಿ ಸಭೆ
ಕೊಪ್ಪಳ, 13 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮೇ 10 ರಿಂದ 14 ರವರೆಗೆ ಜಿಲ್ಲೆಯ ಹುಲಿಗಿಯಲ್ಲಿ ನಡೆಯುವ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು, ಸಾರ್ವಜನಿಕರು ಪಾಲ್ಗೊಳ್ಳಲಿದ್ದು, ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಿ, ಅಚ್ಚುಕಟ್
ಮೇ 10 ರಿಂದ 14 ರವರೆಗೆ ಶ್ರೀ ಹುಲಿಗೆಮ್ಮ ಜಾತ್ರಾ : ಪೂರ್ವಭಾವಿ ಸಭೆ


ಮೇ 10 ರಿಂದ 14 ರವರೆಗೆ ಶ್ರೀ ಹುಲಿಗೆಮ್ಮ ಜಾತ್ರಾ : ಪೂರ್ವಭಾವಿ ಸಭೆ


ಮೇ 10 ರಿಂದ 14 ರವರೆಗೆ ಶ್ರೀ ಹುಲಿಗೆಮ್ಮ ಜಾತ್ರಾ : ಪೂರ್ವಭಾವಿ ಸಭೆ


ಮೇ 10 ರಿಂದ 14 ರವರೆಗೆ ಶ್ರೀ ಹುಲಿಗೆಮ್ಮ ಜಾತ್ರಾ : ಪೂರ್ವಭಾವಿ ಸಭೆ


ಕೊಪ್ಪಳ, 13 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮೇ 10 ರಿಂದ 14 ರವರೆಗೆ ಜಿಲ್ಲೆಯ ಹುಲಿಗಿಯಲ್ಲಿ ನಡೆಯುವ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು, ಸಾರ್ವಜನಿಕರು ಪಾಲ್ಗೊಳ್ಳಲಿದ್ದು, ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಿ, ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೇ 10 ರಿಂದ 14 ರವರೆಗೆ ಹುಲಿಗಿ ಗ್ರಾಮದಲ್ಲಿ ನಡೆಯಲಿರುವ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

5 ದಿನಗಳ ಜಾತ್ರಾ ಮಹೋತ್ಸವದಲ್ಲಿ, ಮುಖ್ಯವಾಗಿ ಮೇ 11 ರಂದು ನಡೆಯಲಿರುವ ಮಹಾರಥೋತ್ಸವದಲ್ಲಿ ಲಕ್ಷಾಂತರ ಭಕ್ತರು, ಸಾರ್ವಜನಿಕರು ಪಾಲ್ಗೊಳ್ಳುವುದರಿಂದ ಸ್ವಚ್ಛತೆ ಮತ್ತು ಸುರಕ್ಷತೆ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮದ ಪ್ರತಿ ರಸ್ತೆ, ದೇವಾಲಯದ ಆವರಣ, ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಬೇಕು. ಬೇಸಿಗೆ ಸಮಯವಾದ್ದರಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ದೇವಸ್ಥಾನ ಮತ್ತು ಆವರಣವನ್ನು, ಗ್ರಾಮವನ್ನು ವಿದ್ಯುತ್ ದೀಪಗಳಿಂದ ಅಲಕಂರಿಸಬೇಕು. ಸಾರ್ವಜನಿಕರ ವಿಶ್ರಾಂತಿ ಗೃಹ, ತಂಗುದಾಣಗಳನ್ನು, ಗ್ರಾಮದಲ್ಲಿನ ಎಲ್ಲ ರಸ್ತೆ, ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ನೀರು ಪೂರೈಸುವ ಎಲ್ಲ ಪೈಪ್ಲೈನ್ಗಳನ್ನು, ಒಎಚ್ಟಿ ಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ದುರಸ್ಥಿಗೊಳಿಸಬೇಕು. ಮೊಬೈಲ್ ಟಾಯ್ಲೆಟ್ಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಬಂಧಿಸಿದ ಪಿಡಿಒ ಹಾಗೂ ದೇವಸ್ಥಾನದ ಪ್ರಾಧಿಕಾರದ ಕಾರ್ಯದರ್ಶಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆಯನ್ನು ನೀಡಿದರು.

ದೇವಸ್ಥಾನದ ಆವರಣ ಮತ್ತು ಸುತ್ತಲಿನ ಪ್ರದೇಶದಲ್ಲಿ ಪ್ರಾಣಿ ಬಲಿ ನಿಷೇಧವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಮತ್ತು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಪ್ರಾಣಿ ಬಲಿ ನೀಡದಂತೆ ಸಾರ್ವಜನಿಕರಿಗೆ ಸೂಕ್ತ ಜಾಗೃತಿ ಮೂಡಿಸಬೇಕು. ಪಶು ಪಾಲನಾ ಇಲಾಖೆಯಿಂದ ನಿಗದಿತ ಸ್ಥಳಗಳಲ್ಲಿ ಚೆಕ್ಪೋಸ್ಟ್ ಸ್ಥಾಪಿಸಬೇಕು. ಹುಲಿಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಸಂಪರ್ಕ ರಸ್ತೆಗಳನ್ನು ಪರಿಶೀಲಿಸಿ, ದುರಸ್ಥಿಗೊಳಿಸಬೇಕು. ಬೇರೆ ಬೇರೆ ರಾಜ್ಯಗಳಿಂದಲೂ ಭಕ್ತರು ಆಗಮಿಸಲಿದ್ದು, ಸೂಕ್ತ ಮಾರ್ಗ ಸೂಚಕ ಫಲಕಗಳನ್ನು, ನೀರು, ಶೌಚಾಲಯ, ವಿಶ್ರಾಂತಿ ಗೃಹಗಳ ಸೂಚಕ ಫಲಕಗಳನ್ನು ಅಳವಡಿಸಬೇಕು. ವಾಹನ ದಟ್ಟನೆ ನಿರ್ವಹಣೆಗೆ ಸೂಕ್ತ ಪಾರ್ಕಿಂಗ್ ಸೌಲಭ್ಯ ಒದಗಿಸಬೇಕು. ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಜಾತ್ರಾ ಮಾಹೋತ್ಸವದಲ್ಲಿ ಮದ್ಯ ಮಾರಾಟ ನಿಷೇಧಿಲಾಗುವುದು. ಅಬಕಾರಿ ಇಲಾಖೆಯವರು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಆರೋಗ್ಯ ಇಲಾಖೆಯಿಂದ ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು. ತಜ್ಞ ವೈದ್ಯರು, ಶುಶ್ರೂಷಕರು, ಸಿಬ್ಬಂದಿಗಳೊಂದಿಗೆ ಅಗತ್ಯ ವೈದ್ಯಕೀಯ ಸೌಲಭ್ಯ, ಅಂಬುಲೆನ್ಸ್ ಒದಗಿಸಬೇಕು. ಬೇಸಿಗೆ ತೀವ್ರವಾಗಿದ್ದು, ಹೆಚ್ಚಿನ ಪ್ರಮಾಣದ ಒಆರ್ಎಸ್ ಅನ್ನು ಒದಗಿಸಬೇಕು. ಆರೋಗ್ಯ ಕೇಂದ್ರಗಳಲ್ಲಿ ನಿರಂತರ ವೈದ್ಯಕೀಯ ಸಿಬ್ಬಂದಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯಾಧಿಕಾರಿಗೆ ಸೂಚಿಸಿದರು.

ಅಗ್ನಿಶಾಮಕ ಇಲಾಖೆ ವತಿಯಿಂದ ಅಗ್ನಿಶಾಮಕ ವಾಹನವನ್ನು ಒದಗಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಲಭ್ಯವಿರುವಂತೆ ಎಚ್ಚರಿಕೆ ವಹಿಸಬೇಕು. ಜಾತ್ರೆ ಸಂದರ್ಭ ದೇವಸ್ಥಾನದ ಪಕ್ಕದಲ್ಲಿನ ನದಿಗೆ ನೀರು ಬಿಡುಗಡೆ ಮಾಡಲಿದ್ದು, ನದಿ ತೀರ ಪ್ರದೇಶದಲ್ಲಿ ಭಕ್ತರು ಸ್ನಾನಕ್ಕೆ ತೆರಳುವುದರಿಂದ ಯಾವುದೇ ಅಪಾಯ ಜರುಗದಂತೆ ಸೂಕ್ತ ಭದ್ರತೆ ಕಲ್ಪಿಸಬೇಕು. ಅಗತ್ಯ ಮುನ್ನೆಚ್ಚರಿಕಾ ಫಲಕಗಳನ್ನು ನದಿ ತೀರ ಪ್ರದೇಶದಲ್ಲಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಬೇರೆ ಬೇರ ರಾಜ್ಯ, ಊರುಗಳಿಂದ ಆಗಮಿಸುವ ಭಕ್ತರಿಗೆ, ಸಾರ್ವಜನಿಕರಿಗೆ ಒದಗಿಸುವ ದೇವಸ್ಥಾನದ ಪ್ರಸಾದವನ್ನು ಆಹಾರ ಗುಣಮಟ್ಟ ಪರೀಕ್ಷೆಗೊಳಪಡಿಸಿ, ಸುರಕ್ಷಿತವಿದ್ದಲ್ಲಿ ಮಾತ್ರ ವಿತರಿಸಬೇಕು. ಕುಡಿಯುವ ನೀರನ್ನು ಸಹ ಪರೀಕ್ಷೆಗೊಳಪಡಿಸಬೇಕು. ಕಲುಷಿತ ಎಂದು ಕಂಡು ಬರುವ ಬೋರ್ವೆಲ್ ಅಥವಾ ಯಾವುದೇ ನೀರಿನ ಮೂಲವನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಬೇಕು. ಆ ನೀರನ್ನು ಯಾರೂ ಬಳಸದಂತೆ ಸೂಕ್ತ ಎಚ್ಚರಿಕೆ ಫಲಕ ಅಳವಡಿಸಬೇಕು. ಬಳಕೆಗೆ ಸಾಧ್ಯವಾಗದಂತೆ ಸೀಲ್ ಮಾಡಬೇಕು. ದೇವಸ್ಥಾನದ ಆವರಣ ಮತ್ತು ಗ್ರಾಮದ ರಸ್ತೆಗಳಲ್ಲಿನ ಒತ್ತುವರಿ ಕಟ್ಟಡ, ವ್ಯಾಪಾರ ಮಳಿಗೆಗಳನ್ನು ಯಾವುದೇ ಹಿಂಜರಿಕೆ ಇಲ್ಲದೆ ನಿಯಮಾನುಸಾರ ತೆರವುಗೊಳಿಸಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಅವರು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭೀವೃದೀ ಪ್ರಾಧಿಕಾರದ ಕಾರ್ಯದರ್ಶಿ ಎಂ.ಎಚ್ ಪ್ರಕಾಶ್ರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ., ಕೊಪ್ಪಳ ತಹಶೀಲ್ದಾರ ಬಸವರಾಜ ತೆನ್ನಳ್ಳಿ, ಕೊಪ್ಪಳ ತಾ.ಪಂ. ಇಒ ದುಂಡಪ್ಪ ತುರಾದಿ ಸೇರಿದಂತೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande