ಪರಿಶಿಷ್ಟ ಪಂಗಡ ಮಹಿಳೆಯರಿಗೆ ಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ
ಬಳ್ಳಾರಿ, 13 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸ್ವಯಂ ಉದ್ಯೋಗ ಆರಂಭಿಸಲು ಆಸಕ್ತಿ ಇರುವ ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ ಬಳ್ಳಾರಿ ಮತ್ತು ಕುರುಗೋಡಿನಲ್ಲಿ 30 ದಿನಗಳ ಕಾಲ ‘ಫ್ಯಾಷನ್ ಡಿಸೈನಿಂಗ್'' ಕುರಿತು ಉಚಿತ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರು ಹೆಸರು ನೋಂ
ಪರಿಶಿಷ್ಟ ಪಂಗಡ ಮಹಿಳೆಯರಿಗೆ ಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ


ಬಳ್ಳಾರಿ, 13 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸ್ವಯಂ ಉದ್ಯೋಗ ಆರಂಭಿಸಲು ಆಸಕ್ತಿ ಇರುವ ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ ಬಳ್ಳಾರಿ ಮತ್ತು ಕುರುಗೋಡಿನಲ್ಲಿ 30 ದಿನಗಳ ಕಾಲ ‘ಫ್ಯಾಷನ್ ಡಿಸೈನಿಂಗ್' ಕುರಿತು ಉಚಿತ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ, ಬಳ್ಳಾರಿಯ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಈ ತರಬೇತಿ ಹಮ್ಮಿಕೊಂಡಿದೆ.

ಈ ತರಬೇತಿಯಲ್ಲಿ ಫ್ಯಾಷನ್ ಡಿಸೈನಿಂಗ್ ವೃತ್ತಿಯ ಪ್ರಾಯೋಗಿಕ ಮತ್ತು ಸಿದ್ಧಾಂತ ತರಬೇತಿಯೊಂದಿಗೆ ವಿವಿಧ ವಿಷಯಗಳ ಬಗ್ಗೆ ತಜ್ಞರಿಂದ ಮಾಹಿತಿ ನೀಡಲಾಗುವುದು.

ಆಯಾ ವೃತ್ತಿಗಳಲ್ಲಿ ಪ್ರಾಯೋಗಿಕ ಹಾಗೂ ಸಿದ್ಧಾಂತದೊ0ದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವುದು ಮತ್ತು ಸಂಬ0ಧಪಟ್ಟ ಇತ್ಯಾದಿ ವಿಷಯಗಳ ಕುರಿತು ಉಪನ್ಯಾಸ, ಮಾಹಿತಿ ನೀಡಲಾಗುವದು.

ಅರ್ಹತೆ :

18 ರಿಂದ 35 ವರ್ಷದೊಳಗಿರಬೇಕು. ಕನಿಷ್ಠ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಪರಿಶಿಷ್ಟ ಪಂಗಡದ ಮಹಿಳೆಯರು ಹಾಗೂ ‘ಯುವನಿಧಿ' ಫಲಾನುಭವಿಗಳಿಗೆ ಆದ್ಯತೆ ಇರಲಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಏ.17 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ – 583102 ಅಥವಾ ಮೊ.9449226221, 7483538942, 9986332736 ಗೆ ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande