
ಕೋಲಾರ, ೧೩ ಏಪ್ರಿಲ್ (ಹಿ.ಸ) :
ಆ್ಯಂಕರ್ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್ಸಿ ನಸೀರ್ ಅಹಮದ್ ಅವರ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಯಾವುದೇ ಕಾರಣಕ್ಕೂ ಒತ್ತಡ ತರಬಾರದು ಒಂದು ವೇಳೆ ರಾಜೀನಾಮೆ ನೀಡಿದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸೈಯದ್ ಅಫ್ರೀದ್ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಜಿಲ್ಲೆಯಲ್ಲಿ ಸೇರಿದಂತೆ ರಾಜ್ಯದಲ್ಲಿ ಅಲ್ಪಸಂಖ್ಯಾತರ ನಾಯಕರಾಗಿ ನಸೀರ್ ಅಹಮದ್ ಮುಂಚೂಣಿಯಲ್ಲಿ ಇದ್ದಾರೆ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಕಾರಣವಾಗಿದ್ದಾರೆ ಅವರ ವಿರುದ್ದ ರಾಜಕೀಯ ಷಡ್ಯಂತ್ರ ಮೂಲಕ ರಾಜೀನಾಮೆ ಪಡೆಯಲು ಮುಂದಾದರೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಪಕ್ಷಕ್ಕೆ ದೊಡ್ಡ ಮಟ್ಟದ ಪರಿಣಾಮ ಎದುರಿಸಬೇಕಾಗುತ್ತದೆ ಕಾಂಗ್ರೆಸ್ ಹೈಕಮಾಂಡ್ ಗೆ ಎಚ್ಚರಿಕೆ ನೀಡಿದರು,
ರಾಜ್ಯದಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಬಂದು, ಯುವ ಕಾಂಗ್ರೆಸ್, ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದಿಂದ ಕಾಂಗ್ರೆಸ್ ಪಕ್ಷದಲ್ಲಿ ಸುಮಾರು ೪೦ ವರ್ಷಗಳ ಕಾಲ ನಿಷ್ಠಾವಂತ ಕಾರ್ಯಕರ್ತರಾಗಿ ಪ್ರಾಮಾಣಿಕವಾಗಿ ಪ್ರತಿಯೊಂದು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹಾಗೂ ತಮಗೆ ವಹಿಸಿದ ಜವಾಬ್ದಾರಿ ಗಳನ್ನು ನಿರ್ವಹಿಸಿದ್ದಾರೆ ನಸೀರ್ ಅಹಮದ್ ರಾಜ್ಯದಲ್ಲಿ ಪ್ರಶ್ನಾತೀತ ನಾಯಕರು ಅವರನ್ನು ರಾಜಕೀಯವಾಗಿ ತುಳಿಯುವ ಹುನ್ನಾರವಾಗಿದೆ ಯಾವುದೇ ಕಾರಣಕ್ಕೂ ರಾಜೀನಾಮೆಗೆ ಮುಂದಾಗಬಾರದು ಸಾಧ್ಯವಾದರೆ ಕೋಲಾರ ಭಾಗದಿಂದ ಮುಂದಿನ ದಿನಗಳಲ್ಲಿ ಸಚಿವರಾಗಿ ನೇಮಕ ಮಾಡುವಂತೆ ಸೈಯದ್ ಆಫ್ರೀದ್ ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್