
ಶಿವಮೊಗ್ಗ, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭೀಮನಕಟ್ಟೆ ತೂಗು ಸೇತುವೆಯನ್ನು ಇಂದು ಸಚಿವ ಸತೀಶ್ ಜಾರಕಿಹೊಳಿ ವೀಕ್ಷಿಸಿ, ಸ್ಥಳದ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದರು.
ಸಾರ್ವಜನಿಕರ ಸುರಕ್ಷತೆ ಮತ್ತು ಸಂಚಾರದ ಅನುಕೂಲತೆ ಗಮನದಲ್ಲಿಟ್ಟುಕೊಂಡು, ಪ್ರಸ್ತುತ ತೂಗು ಸೇತುವೆಯ ಸ್ಥಿತಿಗತಿಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು. ಸ್ಥಳೀಯ ನಿವಾಸಿಗಳ ಬೇಡಿಕೆಗಳನ್ನು ಪರಿಗಣಿಸಿ, ನೂತನ ಸೇತುವೆ ನಿರ್ಮಾಣದ ಅಗತ್ಯತೆಯನ್ನು ಈ ವೇಳೆ ಉಲ್ಲೇಖಿಸಲಾಯಿತು.
ಸ್ಥಳೀಯರ ಮನವಿಗೆ ಸ್ಪಂದಿಸಿದ ಸಚಿವರು, ಸೂಕ್ತ ಯೋಜನೆ ರೂಪಿಸಿ ಶೀಘ್ರದಲ್ಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಯೋಜನೆ ಜಾರಿಗೆ ಬಂದಲ್ಲಿ ಭೀಮನಕಟ್ಟೆ ಭಾಗದ ಜನರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಲಭ್ಯವಾಗಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa