ಹುಬ್ಬಳ್ಳಿ : ಲವ್ ಜಿಹಾದ್ ತಡೆಗಟ್ಟಲು ಹಿಂದೂ ಸಮಾಜದಿಂದ ಪೊಲೀಸ್ ಆಯುಕ್ತರಿಗೆ ಮನವಿ
ಹುಬ್ಬಳ್ಳಿ, 13 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯಲ್ಲಿ ಸಮಸ್ತ ಹಿಂದೂ ಸಮಾಜದ ವತಿಯಿಂದ ಇಂದು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ನಗರದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಹಿಂದೆ ವ್ಯವಸ್ಥಿತ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಗಂಭೀರ ಆರೋಪವನ್ನು ಮನವಿಯಲ್ಲಿ
ಮನವಿ ಸಲ್ಕಿಕೆ


ಹುಬ್ಬಳ್ಳಿ, 13 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿಯಲ್ಲಿ ಸಮಸ್ತ ಹಿಂದೂ ಸಮಾಜದ ವತಿಯಿಂದ ಇಂದು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ನಗರದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಹಿಂದೆ ವ್ಯವಸ್ಥಿತ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಗಂಭೀರ ಆರೋಪವನ್ನು ಮನವಿಯಲ್ಲಿ ಮಾಡಲಾಗಿದೆ.

ಪ್ರೀತಿ ಎಂಬ ಹೆಸರಿನಲ್ಲಿ ಕೆಲವರು ಯುವತಿಯರನ್ನು ಮೋಸಗೊಳಿಸಿ, ಅವರ ಮೇಲೆ ಅತ್ಯಾಚಾರ ನಡೆಸಿ, ಅದರ ವಿಡಿಯೋಗಳನ್ನು ತೆಗೆದು ನಂತರ ಲೈಂಗಿಕ ಶೋಷಣೆಗೆ ಒಳಪಡಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಈ ಪ್ರಕರಣಗಳಲ್ಲಿ ಮಾದಕ ವಸ್ತುಗಳ ಬಳಕೆಯೂ ನಡೆಯುತ್ತಿದೆ ಎಂದು ತಿಳಿಸಲಾಗಿದೆ.

ಈ ಸಂಬಂಧ ಮಾತನಾಡಿದ ಸಮಾಜದ ಮುಖಂಡರಾದ ಶಂಕರಣ್ಣ ಮುನವಳ್ಳಿ, ಮಹಾದೇವ ಕರಮರಿ, ಸಿ.ಹೆಚ್.ವಿ.ಎಸ್.ವಿ ಪ್ರಸಾದ್ ಹಾಗೂ ಸುಭಾಸ್ ಸಿಂಗ್ ಜಮಾದಾರ ಅವರು, “ಈ ಎಲ್ಲ ಘಟನೆಗಳ ಹಿಂದೆ ಸಂಘಟಿತ ಜಾಲವಿದ್ದು, ಇದನ್ನು ತಕ್ಷಣವೇ ಭೇಧಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ವಿಶೇಷವಾಗಿ ಪೋಕ್ಸೋ ಪ್ರಕರಣಗಳಲ್ಲಿ ತ್ವರಿತ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು. ಇನ್ನೂ, ಸಮಾಜ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದರು.

ಮನವಿ ಸ್ವೀಕರಿಸಿದ ಪೊಲೀಸ್ ಆಯುಕ್ತರು, ಪ್ರತಿಯೊಂದು ಪ್ರಕರಣವನ್ನೂ ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು. ಪ್ರಕರಣಗಳ ಹಿಂದೆ ಯಾವುದೇ ಜಾಲ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಪತ್ತೆಹಚ್ಚಲು ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ ಶೃತಿ ಅವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ಹೇಳಿದರು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಐವತ್ತಕ್ಕೂ ಹೆಚ್ಚು ಸಮಾಜದ ಪ್ರಮುಖರು, ಛೇಂಬರ್ ಆಫ್ ಕಾಮರ್ಸ್ ಹಾಗೂ ಬಸವೇಶ್ವರ ಮಾರುಕಟ್ಟೆಯ ವರ್ತಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande