
ತುಮಕೂರು, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿಯನ್ನು ನಗರದ ಬಾಲಗಂಗಾಧರ್ನಾಥ್ ಸ್ವಾಮೀಜಿ ವೃತ್ತದಲ್ಲಿ ಭಾವಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ವಿವಿಧ ಕಲಾತಂಡಗಳೊಂದಿಗೆ ಸಜ್ಜುಗೊಂಡ ಟ್ಯಾಬ್ಲೋಗಳ ಮೆರವಣಿಗೆಗೆ ಗೃಹ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಅಂಬೇಡ್ಕರ್ ಮತ್ತು ಜಗಜೀವನ್ ರಾಮ್ ಅವರ ಜೀವನ ಸಾಧನೆಗಳು ಹಾಗೂ ಸಾಮಾಜಿಕ ಸಂದೇಶಗಳನ್ನು ಪ್ರತಿಬಿಂಬಿಸುವ ಕಲಾತಂಡಗಳು ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜೋತಿ ಗಣೇಶ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಬಿ.ವಿ. ಅಶ್ವಿಜಾ, ಪೊಲೀಸ್ ಅಧೀಕ್ಷಕ ಅಶೋಕ್ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದರು. ಶಾಲಾ–ಕಾಲೇಜು ವಿದ್ಯಾರ್ಥಿಗಳೂ ಉತ್ಸಾಹದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa