ಅಂಬೇಡ್ಕರ್ ಜಯಂತಿ : ಶೇಷಾದ್ರಿಪುರಂನಲ್ಲಿ ಸಚಿವ ದಿನೇಶ್ ಗುಂಡೂರಾವ್ ಪುಷ್ಪನಮನ
ಬೆಂಗಳೂರು, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಶೇಷಾದ್ರಿಪುರಂನ ಶಾಸಕರ ಕಚೇರಿಯಲ್ಲಿ ಇಂದು ಗೌರವಪೂರ್ವಕವಾಗಿ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲ
ಜಯಂತಿ


ಬೆಂಗಳೂರು, 14 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಶೇಷಾದ್ರಿಪುರಂನ ಶಾಸಕರ ಕಚೇರಿಯಲ್ಲಿ ಇಂದು ಗೌರವಪೂರ್ವಕವಾಗಿ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು, “ಸಮಾನತೆ, ಸ್ವಾತಂತ್ರ್ಯ ಮತ್ತು ಬಾಂಧವ್ಯ ಎಂಬ ಮಹತ್ತರ ಮೌಲ್ಯಗಳನ್ನು ಸಮಾಜದಲ್ಲಿ ಬಿತ್ತಿದ ಮಹನೀಯರು ಡಾ. ಅಂಬೇಡ್ಕರ್. ಶೋಷಿತರು ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟ ಇಂದಿಗೂ ನಮಗೆ ದಾರಿದೀಪವಾಗಿದೆ,” ಎಂದು ಹೇಳಿದರು.

ಅಂಬೇಡ್ಕರ್ ಅವರ ದೂರದೃಷ್ಟಿ ಮತ್ತು ಸಂವಿಧಾನ ರಚನೆಯಲ್ಲಿ ನೀಡಿದ ಅಮೂಲ್ಯ ಕೊಡುಗೆ ಭಾರತವನ್ನು ಪ್ರಜಾಸತ್ತಾತ್ಮಕ ರಾಷ್ಟ್ರವಾಗಿ ಶಕ್ತಿವಂತಗೊಳಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.

“ಅವರ ಶ್ರೇಷ್ಠ ಆದರ್ಶಗಳು ಮತ್ತು ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾನತೆ, ನ್ಯಾಯ ಮತ್ತು ಸೌಹಾರ್ದತೆಯ ಸಮಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಪ್ರತಿಜ್ಞೆ ಮಾಡಬೇಕು,” ಎಂದು ಸಚಿವರು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande