
ಹುಬ್ಬಳ್ಳಿ, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಂವಿಧಾನ ಶಿಲ್ಪಿ, ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಗೌರವ ಸಲ್ಲಿಸಲಾಯಿತು.
ಈ ಅಂಗವಾಗಿ ಹುಬ್ಬಳ್ಳಿಯ ಸ್ಟೇಷನ್ ರೋಡ್ ಹಾಗೂ ಕಿಮ್ಸ್ ಆಸ್ಪತ್ರೆ ಬಳಿಯಿರುವ ಬಾಬಾಸಾಹೇಬರ ಪುತ್ಥಳಿಗೆ ಉಪ ಮಹಾಪೌರ ಸಂತೋಷ ಚವ್ಹಾಣ ಅವರು ಪುಷ್ಪನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ. ಅಂಬೇಡ್ಕರ್ ಅವರು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತೋರಿದ ಮಾರ್ಗವು ಪ್ರತಿಯೊಬ್ಬರಿಗೂ ದಾರಿದೀಪವಾಗಿದ್ದು, ಅವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಪ್ರತಿಪಕ್ಷದ ನಾಯಕ ಇಮ್ರಾನ್ ಯಲಿಗಾರ, ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಉಪ ಆಯುಕ್ತ ವಿಜಯ್ ಕುಮಾರ್ ಆರ್., ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಉಮೇಶ್ ಸವಣೂರು ಹಾಗೂ ಗೀರಿಶ ತಳವಾರ, ದಲಿತ ಮುಖಂಡ ಚಂದ್ರು ನೂಲ್ವಿ ಸೇರಿದಂತೆ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa