ಅಂತರ ಜಿಲ್ಲಾ ಕಳ್ಳನ ಬಂಧಿಸಿದ ಅಣ್ಣಿಗೇರಿ ಪೋಲಿಸರು
ಧಾರವಾಡ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನವಾಗಿದ್ದ ಸುಮಾರು ₹6 ಲಕ್ಷ ಮೌಲ್ಯದ ಒಟ್ಟು 1
Arrest


ಧಾರವಾಡ, 14 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನಿಂದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನವಾಗಿದ್ದ ಸುಮಾರು ₹6 ಲಕ್ಷ ಮೌಲ್ಯದ ಒಟ್ಟು 14 ಮೋಟರ್ಸೈಕಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ಕಳ್ಳತನ ಪ್ರಕರಣಗಳಿಗೆ ಸಂಬಂಧ ಇರಬಹುದೆಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಣ್ಣಿಗೇರಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪ್ರಶಂಸಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande