
ಬೆಂಗಳೂರು, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿಯ ಪ್ರಯುಕ್ತವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್ ಅವರ ಆದರ್ಶಗಳು ಸಮಾಜ ಸೇವೆ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸುವ ದಾರಿದೀಪವಾಗಿವೆ ಎಂದು ಹೇಳಿದರು.
ಈ ರಕ್ತದಾನ ಶಿಬಿರವು ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಿಗೆ ಅನುಗುಣವಾಗಿ ಸಾರ್ವಜನಿಕ ಸೇವೆ ಮತ್ತು ಸಾಮಾಜಿಕ ಜವಾಬ್ದಾರಿಯ ಬದ್ಧತೆಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮವಾಗಿದೆ. ಯುವಕರು ಉತ್ಸಾಹದಿಂದ ರಕ್ತದಾನದಲ್ಲಿ ಭಾಗವಹಿಸಿ, ಸಮಾಜಮುಖಿ ಚಟುವಟಿಕೆಗಳಿಗೆ ಕೈಜೋಡಿಸಿದರು.
ಸ್ಥಳೀಯ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa