ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ
ಬಳ್ಳಾರಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 136 ನೇ ಜಯಂತಿಯನ್ನು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಆಚರಿಸಲಾಯಿತು. ಬಳ್ಳಾರಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ
ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ


ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ


ಬಳ್ಳಾರಿ, 14 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತೀಯ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 136 ನೇ ಜಯಂತಿಯನ್ನು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಆಚರಿಸಲಾಯಿತು.

ಬಳ್ಳಾರಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆಯಾಗಿ ಮತ್ತೊಮ್ಮೆ ನೇಮಕ ಆಗಿರುವ ಎಂ.ಎಸ್. ಮಂಜುಳ ಅವರನ್ನು ಈ ಸಂದರ್ಭದಲ್ಲಿ ಗೌರವಿಸಿ ಅಭಿನಂದಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಕಂಬ ಪಂಪಾಪತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ

ಹುಮಯೂನ್ ಖಾನ್, ಮಹಾಪೌರರಾದ ಪಿ. ಗಾದೆಪ್ಪ, ಕ್ರೈಸ್ತ ಅಭಿವೃದ್ಧಿ ನಿಗಮದ ರಾಜ್ಯ ನಿರ್ದೇಶಕರಾದ

ಜೆ. ರವಿಕುಮಾರ್ ಇನ್ನಿತರರು ಈ ಸಂದರ್ಭದಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande