
ಹುಬ್ಬಳ್ಳಿ, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕುಂದಗೋಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದ್ದು, ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಯಿತು.
2025–26ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಅಡಿಯಲ್ಲಿ ಮಂಜೂರಾದ ಕಾಮಗಾರಿಗಳ ಭಾಗವಾಗಿ, ಕುಂದಗೋಳದ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಮೂರನೇ ಮುಖ್ಯ ರಸ್ತೆಯ ಕಾಯ್ದಿರಿಸಿದ ಸ್ಥಳದಲ್ಲಿ ಹೊಸ ಓವರ್ಹೆಡ್ ನೀರಿನ ಟ್ಯಾಂಕ್ ನಿರ್ಮಾಣ ಹಾಗೂ ನಿವೇಶನ ಸಂಖ್ಯೆ 1ರಿಂದ 37ರವರೆಗೆ ಹೊಸ ನೀರಿನ ಪೈಪ್ಲೈನ್ ಅಳವಡಿಸುವ ಕಾಮಗಾರಿಗೆ ಶಾಸಕ ಎಂ.ಆರ್.ಪಾಟೀಲ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಾರುಕಟ್ಟೆ ಪ್ರದೇಶದ ಮೂಲಭೂತ ಸೌಲಭ್ಯಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಯೋಜನೆಗಳು ಮಹತ್ವದ್ದಾಗಿದ್ದು, ವ್ಯಾಪಾರಿಗಳು ಮತ್ತು ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಾಗೀಶ ಮಂಕಟ್ಟಿಮಠ, ರಮೇಶ ಗದಗಿನ, ಗಿರೀಶ ಗದಗಿನ, ಗಣೇಶ ಕೋಕಾಟೆ, ಮಂಜು ಹಿರೇಮಠ, ಸತೀಶ ಪಾಟೀಲ, ನಿಖಿಲ ಗಂಗಾಯಿ, ಸಿದ್ದು ಧಾರವಾಡಶೆಟ್ಟರ ಸೇರಿದಂತೆ ಹಲವು ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa