ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ ; ಸಿದ್ಧತೆ ಪರಿಶೀಲಿಸಿದ ಅಶೋಕ
ಮಂಡ್ಯ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಲಕೆ ಶ್ರೀ ಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ ಹಾಗೂ ಆದಿಚುಂಚನಗಿರಿ ಪವಿತ್ರ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ರಾಜ್ಯದ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಈ ಮಹತ
Visit


ಮಂಡ್ಯ, 14 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಲಕೆ ಶ್ರೀ ಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ ಹಾಗೂ ಆದಿಚುಂಚನಗಿರಿ ಪವಿತ್ರ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ರಾಜ್ಯದ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.

ಈ ಮಹತ್ವದ ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಪೂಜ್ಯ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಸವಿಸ್ತಾರವಾಗಿ ಸಿದ್ಧತೆಗಳನ್ನು ಪರಿಶೀಲಿಸಿದ ಅಶೋಕ ಭಕ್ತರು ಮತ್ತು ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭದ್ರತೆ, ಸಂಚಾರ ನಿಯಂತ್ರಣ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಸಮಗ್ರ ಸಿದ್ಧತೆ ನಡೆಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande