
ಬೆಂಗಳೂರು, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಶ್ವ ಕ್ವಾಂಟಮ್ ದಿನಾಚರಣೆ’ ಅಂಗವಾಗಿ ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ರಾಜ್ಯದ ತಂತ್ರಜ್ಞಾನ ವಲಯಕ್ಕೆ ಮಹತ್ವದ ಸೇರ್ಪಡೆಯಾಗಿರುವ ‘ಕರ್ನಾಟಕ ರಾಜ್ಯ ಕ್ವಾಂಟಮ್ ಎಕೋಸಿಸ್ಟಮ್ ಮ್ಯಾಪ್’ ಅನಾವರಣ ಕಾರ್ಯಕ್ರಮ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ.
ನಗರದ ಜವಾಹರಲಾಲ್ ನೆಹರು ತಾರಾಲಯದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭಾಗವಹಿಸಲಿದ್ದಾರೆ.
ರಾಜ್ಯದಲ್ಲಿ ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ದಿಕ್ಕು ತೋರಿಸುವ ಉದ್ದೇಶದಿಂದ ರೂಪಿಸಲಾದ ಈ ಎಕೋಸಿಸ್ಟಮ್ ಮ್ಯಾಪ್, ಸ್ಟಾರ್ಟ್ಅಪ್ಗಳು, ಸಂಶೋಧನಾ ಸಂಸ್ಥೆಗಳು ಹಾಗೂ ಕೈಗಾರಿಕಾ ವಲಯಗಳ ನಡುವಿನ ಸಹಕಾರವನ್ನು ಬಲಪಡಿಸುವ ನಿರೀಕ್ಷೆಯಿದೆ. ಇದರ ಮೂಲಕ ಕರ್ನಾಟಕವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಮುಂಚೂಣಿಗೆ ತರುವ ಪ್ರಯತ್ನಕ್ಕೆ ಮತ್ತಷ್ಟು ವೇಗ ಸಿಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದಲ್ಲಿ ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸ್ಟಾರ್ಟ್ಅಪ್ಗಳ ಪ್ರತಿನಿಧಿಗಳು ಹಾಗೂ ಅಂತಾರಾಷ್ಟ್ರೀಯ ಗಣ್ಯರು ಕೂಡ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa