
ಸೇಡಂ, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ರಂಜೋಳ ಗ್ರಾಮದಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆ ಕಳೆದುಕೊಂಡ ಬಸವರಾಜ ಅರಿಕೇರಿ ಅವರ ನಿವಾಸಕ್ಕೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ ನೀಡಿ ಸಾಂತ್ವನ ತಿಳಿಸಿದರು.
ಘಟನೆಯ ಬಗ್ಗೆ ಮಾತನಾಡಿದ ಸಚಿವರು, ಬೆಂಕಿ ಅವಘಡದ ನಿಖರ ಕಾರಣ ತಿಳಿಯಲು ತಾಲೂಕು ಆಡಳಿತವು ಸಮಗ್ರ ವರದಿ ಸಲ್ಲಿಸಬೇಕೆಂದು ಸೂಚನೆ ನೀಡಿದರು. ವರದಿ ಆಧಾರವಾಗಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಪೀಡಿತ ಕುಟುಂಬಕ್ಕೆ ವೈಯಕ್ತಿಕವಾಗಿ ಧನಸಹಾಯ ನೀಡಿ, ಸರ್ಕಾರದ ಮಟ್ಟದಲ್ಲಿಯೂ ಸಮರ್ಪಕ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಸತೀಶ್ ರೆಡ್ಡಿ ಪಾಟೀಲ ಅವರು ಹಾನಿಗೊಳಗಾದ ಮನೆಗೆ ಸರ್ಕಾರದಿಂದ ತುರ್ತು ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರು. ಈಗಾಗಲೇ ತಹಶೀಲ್ದಾರರಿಗೆ ವರದಿ ಸಲ್ಲಿಸಲು ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ ಸೇರಿದಂತೆ ಹಲವು ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa