
ಬೆಂಗಳೂರು, 15 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.
ಇತ್ತೀಚೆಗೆ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗೆ ಬೆಂಬಲ ನೀಡದೇ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa