
ಹುಬ್ಬಳ್ಳಿ, 15 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಭಾರತೀಯ ಜನತಾ ಪಾರ್ಟಿಯ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ವತಿಯಿಂದ ಆಯೋಜಿಸಲಾಗುತ್ತಿರುವ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ವರ್ಗದ ಪೂರ್ವಸಿದ್ಧತಾ ಸಭೆ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಕಾರ್ಯಕರ್ತರಲ್ಲಿ ವೈಚಾರಿಕ ಬದ್ಧತೆ, ಪಕ್ಷದ ಇತಿಹಾಸ, ತತ್ವಸಿದ್ಧಾಂತಗಳು ಹಾಗೂ ಸಾಮಾಜಿಕ ಬದ್ಧತೆಯನ್ನು ವೃದ್ಧಿಸುವ ಉದ್ದೇಶದಿಂದ ಪ್ರಶಿಕ್ಷಣ ವರ್ಗ ಆಯೋಜಿಸಲಾಗಿದೆ ಎಂದು ಹೇಳಿದರು.
ಏಪ್ರಿಲ್ 21 ಮತ್ತು 22 ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಈ ಪ್ರಶಿಕ್ಷಣ ವರ್ಗದಲ್ಲಿ ಪಕ್ಷದ ಅಪೇಕ್ಷಿತ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ ಪವಾರ, ರಾಮನಗೌಡ ಶೆಟ್ಟನಗೌಡರ, ಕ್ಷೇತ್ರದ ಬಿಎಲ್ಎ-1 ಪ್ರಶಾಂತ ಜಾಧವ, ಪಾಲಿಕೆಯ ಸದಸ್ಯರಾದ ಭೀರಪ್ಪ ಖಂಡೇಕರ, ಎಂ.ವೈ.ನರಗುಂದ, ಚಂದ್ರಿಕಾ ಮೇಸ್ತ್ರಿ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa